ನವದೆಹಲಿ: 2022 ರೊಳಗೆ ದೇಶದ ಪ್ರತಿಯೊಬ್ಬರಿಗೂ ವಸತಿ ನೀಡುವ ಮಹತ್ವಾಕಾಂಕ್ಷೆ ಹೊಂದಿರುವ ಪ್ರಧಾನ ಮಂತ್ರಿ ಆವಾಜ್ ಯೋಜನೆ(ನಗರ) ಪ್ರಾಜೆಕ್ಟ್ನ ಪ್ರಗತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅಸಮಾಧಾನಗೊಂಡಿದ್ದಾರೆ.
ಈ ಬಗ್ಗೆ ಎಲ್ಲಾ ರಾಜ್ಯಗಳಿಗೆ ಟಾರ್ಗೆಟ್ ನೀಡಿರುವ ಅವರು, ಈ ಯೋಜನೆಯ ಅನುಷ್ಠಾನಕ್ಕೆ ಆದ್ಯತೆ ನೀಡುವಂತೆ ಮತ್ತು ಪ್ರಧಾನಿ ಕಛೇರಿಗೆ ಇದರ ವಿಸ್ತೃತ ಮಾರ್ಗಸೂಚಿಯನ್ನು ಕಳುಹಿಸಿಕೊಡುವಂತೆ ರಾಜ್ಯಗಳಿಗೆ ಸೂಚನೆ ನೀಡಿದ್ದಾರೆ.
2015-16ಮತ್ತು 2016-17ರಲ್ಲಿ ನಿರ್ಮಾಣವಾಗಲು ಅನುಮೋದನೆ ಪಡೆದಿರುವ ವಸತಿಗಳನ್ನು 2017-18ರ ಅಂತ್ಯದೊಳಗೆ ಸಂಪೂರ್ಣಗೊಳಿಸಬೇಕು ಎಂದು ಜುಲೈ 12ರಂದು ನಡೆದ ರಾಜ್ಯ ಮುಖ್ಯ ಕಾರ್ಯದರ್ಶಿಗಳ ಸಭೆಯಲ್ಲಿ ಮೋದಿ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದೇಶದ ಒಟ್ಟು 4,025 ನಗರಗಳಲ್ಲಿ 2022ರೊಳಗೆ 20 ಮಿಲಿಯನ್ ಕೈಗೆಟುಕುವ ದರದ ಮನೆಗಳನ್ನು ನಿರ್ಮಿಸಲು ರಾಜ್ಯ ಮತ್ತು ಸ್ಥಳಿಯ ಆಡಳಿತಗಳ ಮೂಲಕ ಕೇಂದ್ರ ಸರ್ಕಾರ ಅನುದಾನವನ್ನು ಒದಗಿಸುತ್ತಿದೆ.
2015ರಿಂದ 2017ರ ಮಾರ್ಚ್ವರೆಗೆ ಈ ಯೋಜನೆಯಡಿ ಕೇವಲ 1.7 ಮಿಲಿಯನ್ ಮನೆಗಳನ್ನು ಮಾತ್ರ ನಿರ್ಮಿಸಲಾಗಿದೆ. ರಾಜ್ಯಗಳ ಈ ನಿರ್ಲಕ್ಷ್ಯದ ಬಗ್ಗೆ ಮೋದಿ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.