ಕುಂದಾಪುರ: ಶ್ರೀ ಯಾದವೇಂದ್ರ ಆಯುರ್ವೇದ ವೈದ್ಯಶಾಲಾ, ಶ್ರೀ ಭುವನೇಂದ್ರ ಪಂಚಕರ್ಮ ಸೆಂಟರ್, ಬಸವನಗುಡಿ ಕೋಟೇಶ್ವರ ಹಾಗೂ ಶ್ರೀ ವೆಂಕಟರಮಣ ದೇವಸ್ಥಾನ ಸೋಮೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಹೆಸರಾಂತ ಆಯುರ್ವೇದ ವೈದ್ಯರುಗಳಾದ ಕೆಎಮ್ಸಿ ಮಣಿಪಾಲದ ಆಯುರ್ವೇದ ವಿಭಾಗದ ಮುಖ್ಯಸ್ಥರಾದ ಎಮ್. ಎಸ್. ಕಾಮತ್, ಕೇರಳದ ಪ್ರಖ್ಯಾತ ಆಯುರ್ವೇದ ತಜ್ಞರಾದ ಡಾ| ರಾಜೀವ ಶೆಣೈ,ಕೋಟೇಶ್ವರ ಶ್ರೀ ಯಾದವೇಂದ್ರ ಆಯುರ್ವೇದ ವೈದ್ಯಶಾಲೆಯ ಡಾ|ಕಾತ್ಯಾಯಿನಿ ಇವರುಗಳಿಂದ ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರ ಜುಲೈ 23 ನೇ ರವಿವಾರ ಸೋಮೇಶ್ವರ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ.
ಈ ಶಿಬಿರದಲ್ಲಿ ಉಚಿತ ತಪಾಸಣೆ ನಡೆಸಿ ಉಚಿತವಾಗಿ ಔಷದಿ ವಿತರಣೆ ನೀಡಲಾಗುವುದು. ಸಾರ್ವಜನಿಕರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.