ಬಂಟ್ವಾಳ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಗ್ಯಾಸ್ ವಿತರಣೆ ಹಾಗೂ ಮಾಹಿತಿ ಸಮಾವೇಶವು ಬಂಟ್ವಾಳದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಇಂದು (ಜುಲೈ 23) ಬಂಟ್ವಾಳದ ಬಂಟರ ಭವನದಲ್ಲಿ ನಡೆಯಿತು.
ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳ ಸಮಾವೇಶ ಹಾಗೂ ಮಾಹಿತಿ ಕಾರ್ಯಕ್ರಮದಲ್ಲಿ ಉಚಿತ ಅಡುಗೆ ಅನಿಲ ಸಂಪರ್ಕ ಹಾಗೂ ಗ್ಯಾಸ್ಸ್ಟವ್ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಉಜ್ವಲ ಯೋಜನೆಯಡಿ ಅಡುಗೆ ಅನಿಲ ಪಡೆಯುವ ಬಗ್ಗೆ ಮಾಹಿತಿ ಹಾಗೂ ಅರ್ಜಿ ನೀಡಲು ಬಾಕಿ ಇರುವವರರಿಂದ ಅರ್ಜಿ ಸ್ವೀಕಾರವೂ ನಡೆಯಿತು. ಜಿಲ್ಲೆಯ ಸುಮಾರು 46 ಎಲ್ಪಿಜಿ ವಿತರಕಕರು ಪಾಲ್ಗೊಂಡಿದ್ದರು.
ಜಿಲ್ಲೆಯಲ್ಲಿ 44,000 ಫಲಾನುಭವಿಗಳಿದ್ದು, ಈಗಾಗಲೇ 4,000 ಮಂದಿಗೆ ವಿತರಿಸಲಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಸಮಾವೇಶದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಅಂಗಾರ, ಬಿಜೆಪಿ ಮುಖಂಡ ರಾಜೇಶ್ ನಾಯ್ಕ್, ಪದ್ಮನಾಭ ಕೊಟ್ಟಾರಿ, ಕೋಟ ಶ್ರೀನಿವಾಸ್ ಪೂಜಾರಿ, ದ.ಕ. ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.