ನವದೆಹಲಿ: ಸೇನೆಯ ಅದಮ್ಯ ತ್ಯಾಗ ಮತ್ತು ಪರಾಕ್ರಮದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಸಲುವಾಗಿ, ದೇಶಭಕ್ತಿಯನ್ನು ಉತ್ತೇಜಿಸುವ ಸಲುವಾಗಿ ಕ್ಯಾಂಪಸ್ ಒಳಗಡೆ ಸೇನಾ ಟ್ಯಾಂಕರ್ವೊಂದನ್ನು ಅನುಷ್ಠಾನಗೊಳಿಸುವಂತೆ ಜೆಎನ್ಯು ಉಪಕುಲಪತಿ ಜಗದೀಶ್ ಕುಮಾರ್ ಕೇಂದ್ರಕ್ಕೆ ಮನವಿ ಮಾಡಿಕೊಂಡಿದ್ದಾರೆ.
ಕಾರ್ಗಿಲ್ ಯುದ್ಧದ ಹುತಾತ್ಮರನ್ನು ಸ್ಮರಿಸಲು ಮತ್ತು ಭಾರತದ ವಿಜಯವನ್ನು ಆಚರಿಸಲು ನಡೆಸಲಾದ ಸಮಾರಂಭವೊಂದರಲ್ಲಿ ಮಾತನಾಡಿದ ಅವರು ಈ ಮನವಿ ಮಾಡಿಕೊಂಡಿದ್ದಾರೆ. ಆರ್ಮಿ ಟ್ಯಾಂಕರ್ ವಿದ್ಯಾರ್ಥಿಗಳಿಗೆ ಸೈನಿಕರ ತ್ಯಾಗ ಮತ್ತು ಶೌರ್ಯವನ್ನು ಸದಾ ಸ್ಮರಿಸಿಕೊಡುತ್ತದೆ ಎಂದು ಅವರು ಹೇಳಿದ್ದಾರೆ.
ಈ ವೇಳೆ ಜೆಎನ್ಯು ಮುಖ್ಯ ದ್ವಾರದಿಂದ ಕನ್ವೆಂಷನ್ ಸೆಂಟರ್ವರೆಗೆ 2,200 ಅಡಿ ಎತ್ತರದ ರಾಷ್ಟ್ರಧ್ವಜವನ್ನು ಹೊತ್ತು ತಿರಂಗಾ ಮಾರ್ಚ್ ನಡೆಸಲಾಯಿತು. ಇದರಲ್ಲಿ ಜೆಎನ್ಯುನ ಸುಮಾರು 2 ಸಾವಿರಕ್ಕೂ ಅಧಿಕ ಸದಸ್ಯರು ಪಾಲ್ಗೊಂಡಿದ್ದರು.
ಕೇಂದ್ರ ಸಚಿವ ಧರ್ಮೆಂದ್ರ ಪ್ರಧಾನ್, ಜನರಲ್ ವಿ.ಕೆ.ಸಿಂಗ್, ಕ್ರಿಕೆಟಿಗ ಗೌತಮ್ ಗಂಭೀರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.