ನವದೆಹಲಿ: ಬಿಲ್ಡರ್ಸ್ ಮತ್ತು ಫ್ಲ್ಯಾಟ್ ಖರೀದಿದಾರರ ನಡುವೆ ನಡೆಯುತ್ತಿರುವ ವಿವಾದಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಖಡಕ್ ಸಂದೇಶವನ್ನು ರವಾನಿಸಿದ್ದಾರೆ.
1.5 ಲಕ್ಷ ಪ್ಲ್ಯಾಟ್ಗಳನ್ನು ಸಮಯಕ್ಕೆ ಸರಿಯಾಗಿ ಖರೀದಿದಾರರಿಗೆ ನೀಡಬೇಕು, ಇಲ್ಲವಾದರೆ ರಿಯಲ್ ಎಸ್ಟೇಟ್ನವರು ಕ್ರಮ ಎದುರಿಸಬೇಕಾಗುತ್ತದೆ. ಮಾತ್ರವಲ್ಲ ಸಾರ್ವಜನಿಕರ ಭರವಸೆಯನ್ನು ಕಳೆದುಕೊಳ್ಳಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಕಳೆದ ನಾಲ್ಕು ದಿನಗಳಿಂದ ರಾಜ್ಯದಲ್ಲಿ ಬಿಲ್ಡರ್ಸ್ ಮತ್ತು ಖರೀದಿದಾರರ ನಡುವೆ ವಿವಾದ ನಡೆಯುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಕಾಮಗಾರಿಯನ್ನು ಪೂರ್ಣಗೊಳಿಸದೆ ಇರುವುದು ಅದರಲ್ಲೂ ಪ್ರಮುಖವಾಗಿ ನೊಯ್ಡಾ ಮತ್ತು ಗ್ರೇಟರ್ ನೋಯ್ಡಾದಲ್ಲಿ ಬಿಲ್ಡರ್ಗಳ ದೊಡ್ಡ ಸಮಸ್ಯೆಯಾಗಿದೆ. ಸುಮಾರು ೧.೫ ಲಕ್ಷ ಮಂದಿ ಫ್ಲ್ಯಾಟ್ ಖರೀದಿಗೆ ಹಣಕೊಟ್ಟು ಕಾಯುತ್ತಾ ಕುಳಿತಿದ್ದಾರೆ. ಇದರಿಂದಾಗಿ ಜನರ ರಿಯಲ್ ಎಸ್ಟೇಟ್ ಮೇಲಿನ ಭರವಸೆ ಕುಸಿಯುತ್ತಾ ಸಾಗಿದೆ’ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.