ನವದೆಹಲಿ: ಭಾರತ ಗಮನಾರ್ಹ ಪ್ರಗತಿಯನ್ನು ಸಾಧಿಸುತ್ತಿದ್ದು, ಸ್ವಾತಂತ್ರ್ಯದ ಬಳಿಕ ಹೊಸ ಎತ್ತರವನ್ನು ತಲುಪಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಿಸಿದ್ದು, 2022ರ ವೇಳೆಗೆ ವಿಶ್ವದ ಅತ್ಯಂತ ಪ್ರಭಾವಿ ರಾಷ್ಟ್ರವಾಗಿ ಭಾರತ ದೇಶ ಹೊರಹೊಮ್ಮುತ್ತದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಸಂಸತ್ತಿನ ಲೈಬ್ರರಿ ಕಟ್ಟಡದಲ್ಲಿ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಇದೇ ವೇಳೆ 70ನೇ ಸ್ವಾತಂತ್ರ್ಯ ದಿನಾಚರಣೆಯ ಬಗ್ಗೆ ವಿವರಿಸಿದರು.
ಆಗಸ್ಟ್ 9ರಿಂದ ಆಗಸ್ಟ್ 15ರವರೆಗೆ ನಡೆಯಬೇಕಾಗಿರುವ ಹಲವು ಕಾರ್ಯಕ್ರಮಗಳ ಬಗ್ಗೆ ಇಲ್ಲಿ ಅವರು ಘೋಷಣೆ ಮಾಡಿದರು ಎಂಬುದಾಗಿ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಹೇಳಿದ್ದಾರೆ.
ಜನರಿಗೆ ಸರ್ಕಾರದ ಮಹತ್ವದ ಯೋಜನೆಗಳ ಬಗ್ಗೆ ಮಾಹಿತಿ ನೀಡುವಂತೆ ಅವರು ಸಂಸದರಿಗೆ ಕರೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.