ಬಿಹಾರದಲ್ಲಿ ಅಧಿಕಾರ ಹಿಡಿಯುವ ಮೂಲಕ ಬಿಜೆಪಿ ಮತ್ತು ಅದರ ಮೈತ್ರಿ ಕೂಟ ರಾಜ್ಯಭಾರ ನಡೆಸುತ್ತಿರುವ ರಾಜ್ಯಗಳ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಕೇವಲ 5 ರಾಜ್ಯ ಮತ್ತು 1 ಕೇಂದ್ರಾಡಳಿತ ಪ್ರದೇಶದಲ್ಲಿ ಕಾಂಗ್ರೆಸ್ಗೆ ಅಧಿಕಾರವಿದೆ. ಉಳಿದ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ಅಧಿಕಾರದಲ್ಲಿವೆ.
ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ, ಅಸ್ಸಾಂ, ಛತ್ತೀಸ್ಗಢ, ಗೋವಾ, ಗುಜರಾತ್, ಯುಪಿ, ಬಿಹಾರ, ಮಹಾರಾಷ್ಟ್ರ, ಮಧ್ಯಪ್ರದೇಶ, ಜಾರ್ಖಾಂಡ್, ಹರಿಯಾಣ, ರಾಜಸ್ಥಾನ, ನಾಗಾಲ್ಯಾಂಡ್, ಮಣಿಪುರ, ಸಿಕ್ಕಿಂ, ಉತ್ತರಾಖಂಡ ಮತ್ತು ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಮತ್ತು ಅದರ ಮೈತ್ರಿ ಪಕ್ಷಗಳು ಅಧಿಕಾರದಲ್ಲಿವೆ.
ಪಂಜಾಬ್, ಕರ್ನಾಟಕ, ಹಿಮಾಚಲ ಪ್ರದೇಶ, ಮೇಘಾಲಯ, ಮಿಜೋರಾಂಗಳಲ್ಲಿ ಕಾಂಗ್ರೆಸ್ ಆಡಳಿತದಲ್ಲಿದೆ.
ಪಶ್ಚಿಮಬಂಗಾಳದಲ್ಲಿ ಟಿಎಂಸಿ, ತಮಿಳುನಾಡಿನಲ್ಲಿ ಎಐಎಡಿಎಂಕೆ, ತೆಲಂಗಾಣದಲ್ಲಿ ಟಿಆರ್ಎಸ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ಆಡಳಿತದಲ್ಲಿವೆ.
೨೦೧೪ರ ಲೋಕಸಭಾ ಚುನಾವಣೆಯ ಬಳಿಕ ಎನ್ಡಿಎ ಮೈತ್ರಿಕೂಟ ಅತೀ ಪ್ರಬಲ ರಾಜಕೀಯ ಶಕ್ತಿಯಾಗಿ ದೇಶದಲ್ಲಿ ಹೊರಹೊಮ್ಮುತ್ತಾ ಬಂದಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.