ನವದೆಹಲಿ: ದೊಡ್ಡ ಮಟ್ಟದಲ್ಲಿ ಬೈಕ್ ಟ್ಯಾಕ್ಸಿಗಳನ್ನು ಓಡಿಸುವ ಯೋಜನೆ ಸರ್ಕಾರದ ಮುಂದಿದೆ, ಅಲ್ಲದೇ ಹೊಸ ಮತ್ತು ಆರ್ಥಿಕ ವಿಧಾನದಲ್ಲಿ ಪ್ರಯಾಣ ಸಮಯವನ್ನು ಒಳಗೊಂಡ ಆ್ಯಪ್ನ್ನು ಪರಿಚಯಿಸಲಾಗುತ್ತದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಬೈಕ್ ಟ್ಯಾಕ್ಸಿಗಳು ಟ್ರಾಫಿಕ್ ದಟ್ಟನೆಯನ್ನು ಕಡಿಮೆ ಮಾಡುವುದು ಮಾತ್ರವಲ್ಲದೇ ಗ್ರಾಮೀಣ ಭಾಗದಲ್ಲಿನ ಜನರಿಗೂ ಕೈಗೆಟುಕುವ ದರದಲ್ಲಿ ಪ್ರಯಾಣ ಸೌಲಭ್ಯವನ್ನು ನೀಡಲಿದೆ ಎಂದು ಗಡ್ಕರಿ ಅಭಿಪ್ರಾಯಿಸಿದ್ದಾರೆ.
ಈಗಾಗಲೇ ದೇಶದ ಕೆಲವು ಭಾಗಗಳಲ್ಲಿ ಬೈಕ್ ಟ್ಯಾಕ್ಸಿಗಳಿದ್ದು, ಇವುಗಳನ್ನು ಖಾಸಗಿ ಸಂಸ್ಥೆಗಳು ಆರಂಭಿಸಿವೆ.
ಇದೀಗ ಸರ್ಕಾರ ಬೈಕ್ ಟ್ಯಾಕ್ಸಿಗಳನ್ನು ಪರಿಚಯಿಸಲು ಮುಂದಾಗಿದೆ. ಇದರಿಂದಾಗಿ ಜನರು ತಮಗೆ ಬೇಕಾದ ಪ್ರಯಾಣದ ವಾಹನವನ್ನು ಆರಿಸಬಹುದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.