ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಮತ್ತು ಲೆಫ್ಟಿನೆಂಟ್ ಗವರ್ನರ್ ಗುದ್ದಾಟ ತಾರಕಕ್ಕೇರಿದೆ. ಅರವಿಂದ್ ಕೇಜ್ರೀವಾಲ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದಲ್ಲಿ ಕೇಂದ್ರ ಸರಕಾರ ಲೆಫ್ಟಿನೆಂಟ್ ಗವರ್ನರ್ ಮೂಲಕ ದೆಹಲಿ ಸರ್ಕಾರವನ್ನು ನಡೆಸಲು ಯತ್ನಿಸುತ್ತಿದೆ ಎಂದು ಅವರು ಆಪಾದಿಸಿದ್ದಾರೆ.
ದೆಹಲಿಯಲ್ಲಿ ಸ್ವತಂತ್ರವಾಗಿ ಸರ್ಕಾರ ನಡೆಸಲು ಅವಕಾಶ ಮಾಡಿಕೊಡುವ ಮತ್ತು ಅಧಿಕಾರಿಗಳ ನೇಮಕಾತಿ- ವರ್ಗಾವಣೆಗೆ ಸಂಬಂಧಪಟ್ಟಂತೆ ಲೆಫ್ಟಿನೆಂಟ್ ಗವರ್ನರ್ ಜಂಗ್ ನಡವಳಿಕೆಗಳನ್ನು ಪತ್ರದಲ್ಲಿ ವಿವರಿಸಿದ್ದಾರೆ.
ದೆಹಲಿಯ ಉಸ್ತುವಾರಿ ಮುಖ್ಯ ಕಾರ್ಯದರ್ಶಿಯಾಗಿ ಶಕುಂತಲಾ ಗಾಮ್ಲಿನ್ ಅವರನ್ನು ಲೆಫ್ಟಿನೆಂಟ್ ಗವರ್ನರ್ ಸೂಚನೆ ಮೇರೆಗೆ ಪ್ರಿನ್ಸಿಪಲ್ ಕಾರ್ಯದರ್ಶಿ ಅನಿಂಡೋ ಮಜುಂದಾರ್ ನೇಮಕ ಮಾಡುವುದರೊಂದಿಗೆ ಆಪ್ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರ ಮಧ್ಯೆ ಜಟಾಪಟಿ ನಡೆಯುತ್ತಿದ್ದು, ಇದೀಗ ರಾಷ್ಟ್ರಪತಿಗಳವರೆಗೂ ತಲುಪಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.