ವಾಷಿಂಗ್ಟನ್: 1960ರ ಸಿಂಧೂ ನದಿ ನೀರು ಒಪ್ಪಂದದಡಿ ಕೆಲವೊಂದು ನಿರ್ಬಂಧಗಳೊಂದಿಗೆ ಜೆಲಂ ಮತ್ತು ಚೆನಾಬ್ ನದಿಗಳ ಉಪನದಿಗಳ ಮೇಲೆ ಹೈಡ್ರೋಎಲೆಕ್ಟ್ರಿಕ್ ಪವರ್ ಪ್ಲಾಂಟ್ ಸ್ಥಾಪನೆ ಮಾಡಲು ಭಾರತಕ್ಕೆ ವಿಶ್ವಬ್ಯಾಂಕ್ ಸಮ್ಮತಿ ನೀಡಿದೆ.
ಸಿಂಧು ನದಿ ನೀರು ಒಪ್ಪಂದದ ಬಗ್ಗೆ ಭಾರತ ಮತ್ತು ಪಾಕಿಸ್ಥಾನದ ನಡುವೆ ನಡೆದ ಕಾರ್ಯದರ್ಶಿಗಳ ಮಟ್ಟದ ಸಭೆ ಮುಕ್ತಾಯವಾದ ಬೆನ್ನಲ್ಲೇ ವಿಶ್ವಸಂಸ್ಥೆ ಈ ಘೋಷಣೆ ಮಾಡಿದೆ.
ಭಾರತ ಜಮ್ಮು ಕಾಶ್ಮೀರದಲ್ಲಿ ಕಿಶಾನ್ಗಂಗಾ(330ಮೆಗಾವ್ಯಾಟ್) ಮತ್ತು ರ್ಯಾಟಲ್(850 ಮೆಗಾವ್ಯಾಟ್) ಹೈಡ್ರೋಎಲೆಕ್ಟ್ರಿಕ್ ಪವರ್ ಪ್ಲಾಂಟ್ ನಿರ್ಮಿಸಲು ಮುಂದಾಗಿರುವುದನ್ನು ಪಾಕಿಸ್ಥಾನ ತೀವ್ರವಾಗಿ ವಿರೋಧಿಸುತ್ತಾ ಬಂದಿದೆ. ಇದೀಗ ವಿಶ್ವಬ್ಯಾಂಕ್ ಭಾರತಕ್ಕೆ ಸಮ್ಮತಿ ನೀಡಿರುವುದು ಪಾಕಿಸ್ಥಾನಕ್ಕೆ ಮುಖಭಂಗವನ್ನುಂಟು ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.