ಶ್ರೀನಗರ: ದಕ್ಷಿಣ ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿ ಗುರುವಾರ ತಡರಾತ್ರಿ ನಡೆದ ಎನ್ಕೌಂಟರ್ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಹೊಸದಾಗಿ ನಿಯೋಜಿತನಾದ ಉಗ್ರನೊಬ್ಬನನ್ನು ಹತ್ಯೆ ಮಾಡಲಾಗಿದೆ.
ಮೃತ ಉಗ್ರನನ್ನು ಯವರ್ ನಿಸಾರ್ ಶೇರ್ ಗುಜೀರಿ ಅಲಿಯಾಸ್ ಅಲ್ಗಝಿ ಎಂದು ಗುರುತಿಸಲಾಗಿದೆ. ಈತ ಅನಂತ್ನಾಗ್ ನಿವಾಸಿಯಾಗಿದ್ದ. ಈತನ ಬಳಿಯಿದ್ದ 2 ಮ್ಯಾಗಜೀನ್, 40 ಯುದ್ಧ ಸಾಮಾಗ್ರಿ, ಒಂದು ಚೈನೀಸ್ ಹ್ಯಾಂಡ್ ಗ್ರೆನೇಡ್, ಪೌಚ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ರಾಷ್ಟ್ರೀಯ ರೈಫಲ್ಸ್, ಸಿಆರ್ಪಿಎಫ್ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಎನ್ಕೌಂಟರ್ ನಡೆಸಿದ್ದಾರೆ.
ಇದೇ ಕಾರ್ಯಾಚರಣೆಯ ವೇಳೆ ಅಪರಚಿತ ವ್ಯಕ್ತಿಯೊಬ್ಬನೂ ಮೃತನಾಗಿದ್ದಾನೆ, ಈತನ ಗುರುತು ಪತ್ತೆ ಇನ್ನಷ್ಟೇ ಆಗಬೇಕಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.