ನವದೆಹಲಿ: ದೇಶದ ನೂತನ ಉಪರಾಷ್ಟ್ರಪತಿಯಾಗಿ ಎನ್ಡಿಎ ಅಭ್ಯರ್ಥಿ ವೆಂಕಯ್ಯ ನಾಯ್ಡು ಅವರು ಆಯ್ಕೆಯಾಗಿದ್ದಾರೆ. ಅವರು ಒಟ್ಟು 516 ಮತಗಳನ್ನು ಗಳಿಸುವ ಮೂಲಕ, ವಿರೋಧ ಪಕ್ಷಗಳ ಅಭ್ಯರ್ಥಿ ಗೋಪಾಲ ಕೃಷ್ಣ ಗಾಂಧಿ(244)ಯವರನ್ನು 272 ಮತಗಳಿಂದ ಸೋಲಿಸಿದ್ದಾರೆ.
ಆಂಧ್ರದ ನೆಲ್ಲೂರಿನವರಾದ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ನಗರಾಭಿವೃದ್ಧಿ ಮತ್ತು ವಸತಿ ಖಾತೆ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದರು.
2002 ರಿಂದ 2004 ರವರೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿಯೂ ಇವರು ಕರ್ತವ್ಯ ನಿರ್ವಹಿಸಿದ್ದಾರೆ.
ಅತ್ಯುತ್ತಮ ವಾಗ್ಮಿ ಎನಿಸಿಕೊಂಡಿರುವ ಇವರು, ರೈತರು ಮತ್ತು ಹಿಂದುಳಿದವರ ಪರ ನಿರಂತರವಾಗಿ ಧ್ವನಿಯೆತ್ತಿದ್ದಾರೆ. ಇದೀಗ ಅವರು ದೇಶದ 13ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.
ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ವೆಂಕಯ್ಯ ನಾಯ್ಡು ಅವರಿಗೆ ಪ್ರಧಾನಿ ನರೇಂದ್ರ ಮೋದಿ, ಅರುಣ್ ಜೇಟ್ಲಿ ಸೇರಿದಂತೆ ಗಣ್ಯರು ಶುಭಾಶಯಗಳನ್ನು ಟ್ವೀಟ್ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.