ಮಂಗಳೂರು : ಆಗಸ್ಟ್ 13 ರ ಆದಿತ್ಯವಾರದಂದು, ಮಂಗಳೂರಿನ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಠದಲ್ಲಿ ಅಂತರ್ಯೋಗ – ಆಧ್ಯಾತ್ಮಿಕ ಶಿಬಿರ ನಡೆಯಲಿದೆ. ಕಾರ್ಯಕ್ರಮವು ಪೂರ್ವಾಹ್ನ 9 ರಿಂದ ಅಪರಾಹ್ನ 3.30 ರವೆರೆಗೆ ಜರುಗಲಿದ್ದು ಆಸಕ್ತರಿಗೆ ಪ್ರವೇಶ ಮುಕ್ತವಾಗಿರುತ್ತದೆ. ಆಸಕ್ತರು 12 ಆಗಸ್ಟ್ ಒಳಗೆ ತಮ್ಮ ಹೆಸರುಗಳನ್ನು ಆಶ್ರಮದ ಕಾರ್ಯಾಲಯದಲ್ಲಿ ನೋಂದಾಯಿಸಬಹುದು (ಕಾರ್ಯಾಲಯ – 2414412)
ಕಾರ್ಯಕ್ರಮದಲ್ಲಿ ಅರ್ಚನೆ, ಭಜನೆ, ಧ್ಯಾನ, ಉಪನ್ಯಾಸ ಕಾರ್ಯಕ್ರಮಗಳಿರುತ್ತದೆ. ಮೈಸೂರು ರಾಮಕೃಷ್ಣ ಮಠದ ಸನ್ಯಾಸಿಗಳಾದ ಸ್ವಾಮಿ ಶಾಂತಿವ್ರತಾನಂದಜಿಯವರು ಕೃಷ್ಣಂ ವಂದೇ ಜಗದ್ಗುರುಂ ಎಂಬ ವಿಷಯವಾಗಿ, ಬೆಂಗಳೂರಿನ ರಾಮಕೃಷ್ಣ ವೇದಾಂತ ಆಶ್ರಮದ ಮುಖ್ಯಸ್ಥರಾದ ಸ್ವಾಮಿ ಅಭಯಾನಂದಜಿಯವರು ಆದ್ವೈತಾಮೃತವರ್ಷಿಣೀ ಗೀತಾ ಎಂಬ ವಿಷಯವಾಗಿ ಪ್ರವಚನ ನೀಡಲಿರುವರು. ಅಪರಾಹ್ನ 1.30 ಕ್ಕೆ ಶಿವಮೊಗ್ಗದ ಖ್ಯಾತ ಉಪನ್ಯಾಸಕರಾದ ಶ್ರೀ ಜಿ. ಎಸ್. ನಟೇಶ್ ಅವರು ಮಂಕುತಿಮ್ಮನ ಕಗ್ಗದ ಕುರಿತು ಪ್ರವಚನ ನೀಡಲಿರುವರು. ಆಸಕ್ತರೆಲ್ಲರಿಗೂ ಆದರದ ಆಹ್ವಾನವಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.