ನವದೆಹಲಿ: ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ಸುಮಾರು 40 ಸಾವಿರ ರೊಹಿಂಗ್ಯ ಮುಸ್ಲಿಂರನ್ನು ವಾಪಸ್ ಕಳುಹಿಸುವ ಸಲುವಾಗಿ ಸರ್ಕಾರ ಬಾಂಗ್ಲಾದೇಶ ಮತ್ತು ಮಯನ್ಮಾರ್ನೊಂದಿಗೆ ಮಾತುಕತೆ ನಡೆಸುತ್ತಿದೆ, ಇದಕ್ಕಾಗಿ ಟಾಸ್ಕ್ ಫೋರ್ಸ್ ಸ್ಥಾಪಿಸುವಂತೆ ರಾಜ್ಯಗಳಿಗೆ ತಿಳಿಸಲಾಗಿದೆ.
ಬೌದ್ಧ ಧರ್ಮಿಯರು ಬಹುಸಂಖ್ಯಾತರಾಗಿರುವ ಮಯನ್ಮಾರ್ನಿಂದ ಸಾವಿರಾರು ರೊಹಿಂಗ್ಯ ಮುಸ್ಲಿಮರು 1990ರ ವೇಳೆಯಲ್ಲಿ ಬಾಂಗ್ಲಾದೇಶಕ್ಕೆ ವಲಸೆ ಹೋಗಿದ್ದರು, ಅವರಲ್ಲಿ ಹಲವಾರು ಗಡಿಯನ್ನು ನುಸುಳಿ ಭಾರತಕ್ಕೆ ಬಂದು ಅಕ್ರಮವಾಗಿ ನೆಲೆಸಿದ್ದಾರೆ.
ಭಾರತದಲ್ಲಿ ನೆಲೆಸಿರುವ ಕೇವಲ 14 ಸಾವಿರ ರೊಹಿಂಗ್ಯಗಳು ಮಾತ್ರ ವಿಶ್ವಸಂಸ್ಥೆಯ ನಿರಾಶ್ರಿತ ಏಜೆನ್ಸಿಗೆ ನೋಂದಣಿಯಾಗಿದ್ದಾರೆ. ಇತರರು ಅಕ್ರಮವಾಗಿ ನಿಲೆಸಿದ್ದು, ವಾಪಸ್ ಕಳುಹಿಸಲು ಅರ್ಹರಾಗಿದ್ದಾರೆ.
ಈ ವಿಷಯದ ಬಗ್ಗೆ ಮಯನ್ಮಾರ್ ಮತ್ತು ಬಾಂಗ್ಲಾದೇಶದ ನಡುವೆ ರಾಜತಾಂತ್ರಿಕ ನೆಲೆಯಲ್ಲಿ ಮಾತುಕತೆ ನಡೆಯುತ್ತಿದೆ ಎಂದು ಆಂತರಿಕ ಸಚಿವಾಲಯದ ವಕ್ತಾರ ಕೆ.ಎಸ್.ಧಟ್ವಾಲಿಯ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.