ಕಠ್ಮಂಡು: ಭಾರತದ 70ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನಲೆಯಲ್ಲಿ ನೇಪಾಳ ಪ್ರಧಾನಿ ಶೇರ್ ಬಹದ್ದೂರ್ ದ್ಯೋಬ ಅವರು ಭಾರತೀಯರನ್ನು ಕೊಂಡಾಡಿದ್ದಾರೆ, ಭಾರತದೊಂದಿಗಿನ ಮೈತ್ರಿಯಿಂದಾಗಿ ನೇಪಾಳಕ್ಕೆ ಸಾಕಷ್ಟು ಪ್ರಯೋಜನಗಳಾಗಿದೆ ಎಂದಿದ್ದಾರೆ.
ಕಠ್ಮಂಡುವಿನ ಇಂಡಿಯಾ ಹೌಸ್ನಲ್ಲಿ 70ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಏರ್ಪಡಿಸಲಾಗಿದ್ದ ಔತನಕೂಟದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ನನ್ನ ಸರ್ಕಾರ ಭಾರತದೊಂದಿಗೆ ಬಾಂಧವ್ಯವನ್ನು ಮತ್ತಷ್ಟು ಬಲಗೊಳಿಸಲು ಪ್ರಯತ್ನಿಸಲಿದೆ ಎಂದರು.
ವಿದೇಶಾಂಗ ಸಚಿವ ಸುಷ್ಮಾ ಸ್ವರಾಜ್ ಅವರೂ ಸಮಾರಂಭದಲ್ಲಿ ಭಾಗಿಯಾಗಿದ್ದರು.
‘ಭಾರತ ಇಂದು ಏನಾಗಿದೆಯೋ ಅದು ಅಭಿವೃದ್ಧಿಯಿಂದ, ಸಿದ್ಧಾಂತಗಳ ನಿರ್ಬಂಧದಿಂದ ಅಲ್ಲ, ಇಂದು ನಾವು ವಿಶ್ವದ ಅತೀದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಮಾತ್ರವಲ್ಲ, ಅತೀ ಮುಂದುವರೆಯುತ್ತಿರುವ ದೇಶಗಳಲ್ಲಿ ಒಂದು’ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.