ಜಮ್ಮು: ಯುವಕರಲ್ಲಿ ರಾಷ್ಟ್ರಭಕ್ತಿಯನ್ನು ಉದ್ದೀಪನಗೊಳಿಸುವ ಸಲುವಾಗಿ ಭಾರತೀಯ ಸೇನೆಯು ಜಮ್ಮು ವಿಶ್ವವಿದ್ಯಾಲಯದಲ್ಲಿ ಎರಡು ದಿನಗಳ ಶಸ್ತ್ರಾಸ್ತ್ರ ಮತ್ತು ಪರಿಕರ ಪ್ರದರ್ಶನ ಕಾರ್ಯಕ್ರಮವನ್ನು ಏರ್ಪಡಿಸಿತು.
ಗುರುವಾರ ಮತ್ತು ಶುಕ್ರವಾರ ಸೇನೆಯ ಟೈಗರ್ ಡಿವಿಜನ್ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಭಾರತೀಯ ಸೇನೆಯ ಬೃಹತ್ ಶಕ್ತಿ ಇಲ್ಲಿ ಅನಾವರಣಗೊಂಡಿದೆ. ‘ನಿಮ್ಮ ಸೇನೆಯ ಬಗ್ಗೆ ತಿಳಿದುಕೊಳ್ಳಿ’ ಎಂಬ ವಿಷಯದ ಮೇಲೆ ಈ ಪ್ರದರ್ಶನ ಏರ್ಪಡಿಸಲಾಗಿದೆ.
ಸ್ಥಳಿಯ ಯುವಕರಲ್ಲಿ ದೇಶಭಕ್ತಿಯನ್ನು ಮೂಡಿಸುವುದು, ಸೇನೆಗೆ ಸೇರುವಂತೆ ಉತ್ತೇಜಿಸುವುದು ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಸೇನೆ ವಹಿಸುತ್ತಿರುವ ಪಾತ್ರದ ಬಗ್ಗೆ ತಿಳಿಸುವುದು ಈ ಕಾರ್ಯಕ್ರಮದ ಮುಖ್ಯ ಆಶಯವಾಗಿತ್ತು.
ಜಮ್ಮು ಶಾಲಾ ಕಾಲೇಜುಗಳ 7000 ವಿದ್ಯಾರ್ಥಿಗಳು, ಸಿಬ್ಬಂದಿಗಳು ಮತ್ತು 300ಎನ್ಸಿಸಿ ಕೆಡೆಟ್ಗಳು ಇದರಲ್ಲಿ ಪಾಲ್ಗೊಂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.