ಮುಂಬೈ : ರೈಲ್ವೆ ಪ್ರಯಾಣಿಕರಿಗೆ ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ರೈಲ್ವೆ ಸಚಿವಾಲಯ ಶುಭ ಸುದ್ದಿಯನ್ನು ನೀಡಿದೆ.
1 ರೂ. ಕ್ಲಿನಿಕ್ ಮುಂಬೈಯ 10 ವೆಸ್ಟರ್ನ್ ರೈಲ್ವೆ ಸ್ಟೇಷನ್ಗಳಲ್ಲಿ ಆರಂಭಗೊಳ್ಳಲಿದೆ. ಈ ತಿಂಗಳ ಅಂತ್ಯದೊಳಗೆ ಈ ಕ್ಲಿನಿಕ್ಗಳು ಕಾರ್ಯಾರಂಭ ಮಾಡುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂಬರುವ ದಿನಗಳಲ್ಲಿ ವೆಸ್ಟರ್ನ್ ರೈಲ್ವೆಯ 24 ಸ್ಟೇಷನ್ಗಳಲ್ಲಿ ಈ 1 ರೂ. ಕ್ಲಿನಿಕ್ಗಳು ಕಾರ್ಯಾರಂಭ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ಕ್ಲಿನಿಕ್ನ್ನು ಆರಂಭಿಸುವ ಸಲುವಾಗಿ ಕಳೆದ ಹಲವಾರು ತಿಂಗಳುಗಳಿಂದ ವೆಸ್ಟರ್ನ್ ರೈಲ್ವೆ ಆಡಳಿತದೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ಎಲ್ಲಾ ಪ್ರಯಾಣಿಕರಿಗೂ ಕೈಗೆಟುಕುವ ದರದಲ್ಲಿ ಚಿಕಿತ್ಸೆ ಔಷಧಿಗಳನ್ನು ನೀಡಬೇಕು ಎಂಬುದೇ ನಮ್ಮ ಗುರಿ. ಈಗಾಗಲೇ ಸೆಂಟ್ರಲ್ ರೈಲ್ವೇ ಸ್ಟೇಷನ್ಗಳಲ್ಲಿ ಈ 1 ರೂ. ಕ್ಲಿನಿಕ್ ಯಶಸ್ವಿಯಾಗಿ ನಡೆಯುತ್ತಿದೆ.
ಇಂತಹ ಮೊದಲ ಕ್ಲಿನಿಕ್ ಅನ್ನು 2017 ರ ಮೇ 10 ರಂದು ಘಾಟ್ಕೋಪರ್ ರೈಲ್ವೇ ಸ್ಟೇಷನ್ನಲ್ಲಿ ಉದ್ಘಾಟಿಸಿದ್ದೆವು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.