ಲಡಾಖ್: ಭಾರತದ ಗಡಿಯೊಳಗೆ ಪ್ರವೇಶಿಸಲು ಯತ್ನಿಸಿದ ಚೀನಾ ಲಿಬರೇಷನ್ ಆರ್ಮಿಯ ಪ್ರಯತ್ನವನ್ನು ಭಾರತೀಯ ಯೋಧರು ವಿಫಲಗೊಳಿಸಿ ಅವರನ್ನು ಹಿಮ್ಮೆಟ್ಟಿಸಿದ್ದಾರೆ.
ಲಡಾಖ್ನ ಪಂಗಾಂಗ್ ಸರೋವರದ ಸಮೀಪದ ಫಿಂಗರ್ ಫೋರ್ ಮತ್ತು ಫಿಂಗರ್ ಪೈವ್ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ 6 ಮತ್ತು 9 ಗಂಟೆಗೆ ಚೀನಾ ಸೈನಿಕರು ಭಾರತೀಯ ಭೂಪ್ರದೇಶವನ್ನು ನುಗ್ಗಲು ಪ್ರಯತ್ನಿಸಿದ್ದಾರೆ.
ಚೀನಾದ ಸೈನಿಕರ ಎರಡೂ ಪ್ರಯತ್ನವನ್ನು ವಿಫಲಗೊಳಿಸಿ ಅವರನ್ನು ಹಿಮ್ಮೆಟ್ಟಿಸಲಾಗಿದೆ ಎಂದು ಸೇನೆ ತಿಳಿಸಿದೆ.
ಮಾನವ ಸರಪಳಿಯನ್ನು ನಿರ್ಮಿಸಿ ಭಾರತೀಯ ಸೈನಿಕರು ಚೀನಿಯರ ಪ್ರಯತ್ನವನ್ನು ತಡೆದಿದ್ದಾರೆ. ಈ ವೇಳೆ ಉದ್ರಿಕ್ತರಾದ ಚೀನಾ ಪಡೆ ಕಲ್ಲು ತೂರಾಟವನ್ನೂ ನಡೆಸಿತು ಎಂದು ಸೇನಾ ಮೂಲಗಳು ತಿಳಿಸಿವೆ.
ಘಟನೆಯಲ್ಲಿ ಉಭಯ ಸೈನಿಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಭಾರತ ಚೀನಾದ ಈ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದು, ತನ್ನ ಪ್ರತಿಭಟನೆಯನ್ನು ತಿಳಿಸಿದೆ. ಧ್ವಜ ಸಭೆ ನಡೆಸಲು ನಿರ್ಧರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.