ಮಂಗಳೂರು : ಆರ್ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಅವರನ್ನು ಅಮಾನುಷವಾಗಿ ಹತ್ಯೆ ಮಾಡಿದ ಇಬ್ಬರು ಹಂತಕರನ್ನು ಬಂಧಿಸಿದ ದ.ಕ.ಜಿಲ್ಲಾ ಪೊಲೀಸ್ ತಂಡವನ್ನು ಸಂಸದ ನಳಿನ್ಕುಮಾರ್ ಕಟೀಲ್ ಅಭಿನಂದಿಸಿದ್ದಾರೆ.
ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಗುರಿಯಾಗಿಸಿ ಹತ್ಯೆ ನಡೆಸುವ ವ್ಯವಸ್ಥಿತ ಕೃತ್ಯ ಕರಾವಳಿಯಲ್ಲಿ ನಡೆಯುತ್ತಿದೆ. ದೇಶದ್ರೋಹಿ ಸಂಘಟನೆಗಳು ಇದಕ್ಕೆ ಬೆಂಬಲ ನೀಡುತ್ತಿರುವುದು ಸ್ಪಷ್ಟವಾಗಿದೆ. ಪೊಲೀಸ್ ಇಲಾಖೆಯಲ್ಲಿ ಯಾವುದೇ ರಾಜಕೀಯ ಹಸ್ತಕ್ಷೇಪ ನಡೆಯದಿದ್ದರೆ ದುಷ್ಕರ್ಮಿಗಳನ್ನು ಮಟ್ಟ ಹಾಕಬಹುದು. ಇದೀಗ ಶರತ್ ಹಂತಕರನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿರುವುದು, ಜಿಲ್ಲೆಯ ಜನತೆಗೆ ಕೊಂಚ ನೆಮ್ಮದಿ ತಂದಿದೆ. ಹತ್ಯೆಯ ಹಿನ್ನೆಲೆ ಬಗ್ಗೆ ಸಮಗ್ರ ತನಿಖೆಯಾಗಬೇಕು. ಪ್ರಕರಣದಲ್ಲಿ ಶಾಮೀಲಾದ ಎಲ್ಲ ಹಂತಕರನ್ನು ಶೀಘ್ರ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.