ವಾಷಿಂಗ್ಟನ್: ಪಾಕಿಸ್ಥಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯನ್ನು ವಿದೇಶಿ ಉಗ್ರ ಸಂಘಟನೆ ಎಂದು ಅಮೆರಿಕಾ ಘೋಷಿಸಿದೆ. ಇದರ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ನನ್ನು ಕಳೆದ ತಿಂಗಳು ಜಾಗತಿಕ ಭಯೋತ್ಪಾದಕ ಎಂದು ಘೋಷಿಸಲಾಗಿತ್ತು.
ಈ ಸಂಘಟನೆ 1989ರಲ್ಲಿ ಸ್ಥಾಪನೆಯಾಗಿದ್ದು, ಜಮ್ಮು ಕಾಶ್ಮೀರದಲ್ಲಿ ಉಗ್ರ ಚಟುವಟಿಕೆ ನಡೆಸುತ್ತಿರುವ ಹಳೆಯ ಮತ್ತು ದೊಡ್ಡ ಉಗ್ರ ಸಂಘಟನೆ ಇದಾಗಿದೆ.
ಇದೀಗ ಇದನ್ನು ವಿದೇಶಿ ಉಗ್ರ ಸಂಘಟನೆ ಎಂದು ಘೋಷಿಸಿರುವ ಅಮೆರಿಕಾ, ತನ್ನ ನೆಲದಲ್ಲಿನ ಅದರ ಆಸ್ತಿಯನ್ನು ಮುಟ್ಟುಗೋಲು ಹಾಕಲಿದೆ. ಅದರ ಹಣಕಾಸು ಮೂಲಗಳಿಗೆ ಕತ್ತರಿ ಹಾಕಲಿದೆ. ಈ ಸಂಘಟನೆಯೊಂದಿಗೆ ಯಾವುದೇ ವ್ಯವಹಾರ ಇಟ್ಟುಕೊಳ್ಳುವುದಕ್ಕೆ ಯುಎಸ್ ನಾಗರಿಕರಿಗೆ ನಿರ್ಬಂಧ ವಿಧಿಸಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.