ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ಅಲ್ಲಿನ ಸಿಎಂ ಎಡಪ್ಪಾಡಿ ಕೆ ಪಳನಿಸ್ವಾಮಿ ಗುರುವಾರ ಆದೇಶಿಸಿದ್ದಾರೆ.
ಮದ್ರಾಸ್ ಹೈಕೋರ್ಟ್ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯನ್ನು ನಡೆಸಲಾಗುತ್ತದೆ.
ಅಲ್ಲದೇ ಜಯಲಲಿತಾ ಅವರ ಪೋಸ್ ಗಾರ್ಡನ್ ನಿವಾಸವನ್ನು ಸ್ಮಾರಕವನ್ನಾಗಿ ಪರಿವರ್ತಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಜಯಲಲಿತಾ ಸಾವಿನ ಕುರಿತು ಹಲವಾರು ಸಂಶಯಗಳು ಎದ್ದಿವೆ. ಹೀಗಾಗಿ ಎಐಎಡಿಎಂಕೆ(ಪುರಚ್ಚಿ ತಲೈವಿ ಅಮ್ಮ) ಬಣ ಈ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸುತ್ತಲೇ ಇತ್ತು. ಇದೀಗ ಮತ್ತೊಂದು ಬಣದ ಸರ್ಕಾರ ಇದಕ್ಕೆ ಒಪ್ಪಿ ನ್ಯಾಯಾಂಗ ತನಿಖೆಗೆ ಆದೇಶಿಸಿದೆ.
ಈ ನಿರ್ಧಾರದ ಮೂಲಕ ಎಐಎಡಿಎಂಕೆಯ ಉಭಯ ಬಣಗಳು ಪರಸ್ಪರ ವಿಲೀನಗೊಳ್ಳುವ ಸೂಚನೆಯೂ ಸಿಕ್ಕಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.