ಚೆನ್ನೈ: ತಮಿಳುನಾಡು ಮುಖ್ಯಮಂತ್ರಿಯಾಗಿ ಜೆ.ಜಯಲಲಿತಾ ಅವರು ಶನಿವಾರ ಬೆಳಿಗ್ಗೆ 11 ಗಂಟೆಗೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಈ ಹಿನ್ನಲೆಯಲ್ಲಿ ಇಂದು ಅವರು ರಾಜ್ಯಪಾಲ ಕೆ.ರೋಸಯ್ಯ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಅನುಮತಿ ಕೇಳಿದರು.
ರಾಜ್ಯಪಾಲರನ್ನು ಭೇಟಿಯಾಗಲು ರಾಜಭವನಕ್ಕೆ ತೆರಳುವ ಮಾರ್ಗದುದ್ದಕ್ಕೂ ಜಯಾ ಅವರನ್ನು ಕಾಣಲು ಅವರ ಅಭಿಮಾನಿಗಳು ಮುಗಿಬಿದ್ದಿದ್ದರು. ಎಲ್ಲರೂ ಅವರತ್ತ ವಿಕ್ಟರಿ ಸಂಕೇತ ತೋರಿಸುತ್ತಿದ್ದರು. ಕಳೆದ 8 ತಿಂಗಳಲ್ಲಿ ಜಯಾ ಅವರು ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡರು.
ನಾಳೆ ಅವರು ತಮ್ಮ ಸಚಿವರುಗಳೊಂದಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.