ನವದೆಹಲಿ: ತಮ್ಮ ಸಚಿವರುಗಳು ಪಂಚತಾರಾ(5 ಸ್ಟಾರ್) ಹೋಟೆಲ್ಗಳಲ್ಲಿ ತಂಗುವುದಕ್ಕೆ ಮತ್ತು ತಮ್ಮ ಸಚಿವಾಲಯಕ್ಕೆ ಸಂಬಂಧಿಸಿದ ಸಾರ್ವಜನಿಕ ಉದ್ಯಮಗಳಿಂದ ಪ್ರಯೋಜನಗಳನ್ನು ಪಡೆಯುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಧಿಕೃತ ಕರ್ತವ್ಯದಲ್ಲಿ ಇರುವ ವೇಳೆ ಸರ್ಕಾರ ಒದಗಿಸುವ ವಸತಿ ಸೌಲಭ್ಯಗಳನ್ನೇ ಪಡೆಯುವಂತೆ, ಫೈವ್ ಸ್ಟಾರ್ ಹೊಟೇಲ್ಗಳತ್ತ ಆಕರ್ಷಿತರಾಗದಂತೆ ಸಚಿವರುಗಳಿಗೆ ಮೋದಿ ಸೂಚಿಸಿದ್ದಾರೆ ಎನ್ನಲಾಗಿದೆ.
ಅಲ್ಲದೇ ಕೆಲವು ಸಚಿವರುಗಳು ತಮ್ಮ ಸಚಿವಾಲಯಕ್ಕೆ ಸಂಬಂಧಿಸಿದ ಸಾರ್ವಜನಿಕ ವಲಯದ ವಾಹನಗಳನ್ನು ಬಳಸುತ್ತಿದ್ದಾರೆ ಎಂಬ ವರದಿಗಳಿಗೆ ಮೋದಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ವಾಹನಗಳನ್ನು ಈ ರೀತಿ ದುರ್ಬಳಕೆ ಮಾಡಿಕೊಳ್ಳುವುದನ್ನು ಸಹಿಸಿಕೊಳ್ಳುವುದಿಲ್ಲ ಎಂದು ಎಚ್ಚರಿಸಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.