ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ದೆಹಲಿ ಮುಖ್ಯಮಂತ್ರಿ ಕಿಡಿಕಾರಿದ್ದು, ಹಿಂಬಾಗಿಲಿನ ಮೂಲಕ ದೆಹಲಿಯನ್ನು ನಡೆಸಲು ಪ್ರಧಾನಿ ನರೇಂದ್ರ ಮೋದಿ ಪ್ರಯತ್ನ ಪಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಅಧಿಕಾರಿಗಳನ್ನು ನೇಮಿಸಲು ಮತ್ತು ವರ್ಗಾವಣೆಗೊಳಿಸಲು ಲೆಫ್ಟಿನೆಂಟ್ ಗವರ್ನರ್ ಅವರಿಗೆ ಸಂಪೂರ್ಣ ಅಧಿಕಾರವಿದೆ ಎಂದು ಕೇಂದ್ರ ಗೃಹಸಚಿವಾಲಯ ನೋಟಿಫಿಕೇಶನ್ ಹೊರಡಿಸಿರುವುದು ಕೇಜ್ರಿವಾಲ್ ಅವರನ್ನು ತೀವ್ರವಾಗಿ ಕೆರಳಿಸಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು ‘ಭ್ರಷ್ಟಾಚಾರವನ್ನು ರಕ್ಷಿಸಲು ಹಿಂಬಾಗಿಲಿನ ಮೂಲಕ ಆಡಳಿತ ನಡೆಸಲು ಕೇಂದ್ರ ಬಯಸುತ್ತಿದೆ, ಅಲ್ಲದೇ ದೆಹಲಿ ಜನತೆಗೆ ದ್ರೋಹ ಬಗೆದು ಲೆ.ಗವರ್ನರ್ ಪರವಾಗಿ ನೋಟಿಫಿಕೇಶನ್ ಹೊರಡಿಸಿದೆ’ ಎಂದು ಆರೋಪಿಸಿದ್ದಾರೆ.
ತನ್ನ ಸರ್ಕಾರ ನಡೆಸುತ್ತಿರುವ ಭ್ರಷ್ಟಾಚಾರ ವಿರೋಧಿ ಕಾರ್ಯದಿಂದ ಕೇಂದ್ರ ನರ್ವಸ್ ಆಗಿದೆ. ಅದಕ್ಕಾಗಿ ನೋಟಿಫಿಕೇಶನ್ ಹೊರಡಿಸಿದೆ ಎಂದು ಆರೋಪಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.