ಬೆಂಗಳೂರು: ಬೇಸಿಗೆಯ ರಜಾ ದಿನಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಿರುವ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆಯು ಎಪ್ರಿಲ್ ಹಾಗೂ ಮೇ ತಿಂಗಳಲ್ಲಿ ಹುಬ್ಬಳ್ಳಿ- ಚೆನ್ನೈ ನಡುವೆ ಆಯೋಜಿಸಿದ್ದ ವಿಶೇಷ ರೈಲು ಸೇವೆಯ ಅವಧಿಯನ್ನು ಹೆಚ್ಚಿಸಿದೆ.
ಮೇ ಅಂತ್ಯಕ್ಕೆ ಪೂರ್ಣಗೊಳ್ಳಬೇಕಿದ್ದ ಈ ಸೇವಾವಧಿಯನ್ನು ಅ.1ರ ವರೆಗೆ ವಿಸ್ತರಿಸಲು ಆದೇಶಿಸಲಾಗಿದೆ. ಗದಗ, ಹೊಸಪೇಟೆ, ಕೊಪ್ಪಳ, ಬಳ್ಳಾರಿ, ತೋರಣಗಲ್, ಗುಂತಕಲ್ ಮೂಲಕ ಚೆನ್ನೈಗೆ ಸಂಚರಿಸುವ ಈ ರೈಲು ಸೇವೆಯನ್ನು ಪ್ರಯಾಣಿಕರ ಅನುಕೂಲಕ್ಕಾಗಿ ವಿಸ್ತರಿಸಲಾಗಿದೆ. ಸೋಮವಾರ, ಬುಧವಾರಗಳಂದು ಹುಬ್ಬಳ್ಳಿಯಿಂದ ಚೆನ್ನೈಗೆ ಹಾಗೂ ಮಂಗಳವಾರ, ಗುರುವಾರಗಳಂದು ಚೆನ್ನೈನಿಂದ ಹುಬ್ಬಳ್ಳಿಗೆ ಈ ರೈಲು ಸಂಚರಿಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.