ಮೀರಾ ಭಯಾಂದರ್ ಮುನ್ಸಿಪಲ್ ಕಾರ್ಪೋರೇಶನ್ ಚುನಾವಣೆಯಲ್ಲಿ ಬಿಜೆಪಿ 51 ಸ್ಥಾನಗಳೊಂದಿಗೆ ಭರ್ಜರಿ ಜಯಗಳಿಸಿದೆ. ಶಿವಸೇನೆ ಮತ್ತು ಕಾಂಗ್ರೆಸ್ ಕ್ರಮವಾಗಿ 16 ಮತ್ತು 9 ಸ್ಥಾನಗಳನ್ನು ಭದ್ರಪಡಿಸಿಕೊಂಡಿವೆ.
ಭಾರಿ ಮಳೆ ಸುರಿಯುತ್ತಿದ್ದರೂ ಶೇ.47ರಷ್ಟು ಮತದಾನ ನಡೆದಿರುವುದಾಗಿ ವರದಿಯಾಗಿದೆ. ಮೊದಲಾರ್ಧದಲ್ಲಿ ಕೇವಲ ಶೇ.26ರಷ್ಟು ಮತದಾರರು ತಮ್ಮ ಫ್ರ್ಯಾಂಚೈಸ್ನ್ನು ಬಳಸಿದರು. ತದನಂತರ ಈ ಸಂಖ್ಯೆಯಲ್ಲಿ ಏರಿಕೆ ಕಂಡುಬಂತು.
ಜಾತಿ ಪ್ರಮಾಣಪತ್ರದ ಸಮಸ್ಯೆಯಿಂದಾಗಿ ಬಿಜೆಪಿ ಮತ್ತಿ ಶಿವಸೇನೆಯ ಅಭ್ಯರ್ಥಿಗಳ ನಾಮನಿರ್ದೇಶನ ತಿರಸ್ಕೃತವಾದ ಕಾರಣ ಕಾಂಗ್ರೆಸ್ಗೆ ಒಂದು ಸ್ಥಾನವನ್ನು ಅವಿರೋಧವಾಗಿ ಪಡೆದುಕೊಳ್ಳಲು ಸುಲಭವಾಯಿತು.
94 ಸ್ಥಾನಗಳಿಗೆ ಒಟ್ಟು 509 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.
ಮೀರಾ ಭಯಾಂದರ್ ಮುನ್ಸಿಪಲ್ ಕಾರ್ಪೋರೇಶನ್ ಚುನಾವಣೆ ಗೆಲುವು ಪ್ರಧಾನಿ ನರೇಂದ್ರ ಮೋದಿಯವರ ವಿಶ್ವಾಸ ಮತ್ತು ವಿಕಾಸದ ಅಲೆ ಮತ್ತು ಕಾರ್ಯಕರ್ತರ ಅವಿರತ ಪರಿಶ್ರಮದ ಫಲವಾಗಿದೆ. ಶ್ರಮಿಸಿದ ಎಲ್ಲರಿಗೂ ಅಭಿನಂದನೆಗಳು ಮತ್ತು ನಮ್ಮ ಮೇಲೆ ವಿಶ್ವಾಸವಿರಿಸಿದ ಮೀರಾ ಭಯಾಂದರ್ ನ ಜನತೆಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಟ್ವೀಟ್ ಮಾಡಿದ್ದಾರೆ.
ಬಿಜೆಪಿ 90, ಆರ್ಪಿಐ 4, ಕಾಂಗ್ರೆಸ್ 75, ಎನ್ಸಿಪಿ 67 ಮತ್ತು ಶಿವಸೇನೆ ಎಲ್ಲಾ ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.