ಬೆಂಗಳೂರು: ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಸರಕಾರದ ಸಂಭ್ರಮವನ್ನು ಆಚರಿಸುವ ಬದಲಾಗಿ ಅವರು ಅನುಷ್ಠಾನಕ್ಕೆ ತಂದಿರುವ ಯೋಜನೆಗಳನ್ನು ದೇಶದಾದ್ಯಂತ ಜನರಿಗೆ ತಲುಪಿಸುವ ಕಾರ್ಯ ಮಾಡಲಾಗುವುದು ಎಂದು ಕೇಂದ್ರ ರಾಸಾಯನಿಕ ಸಚಿವ ಅನಂತಕುಮಾರ್ ಹೇಳಿದ್ದಾರೆ.
ಅವರು ಬೆಂಗಳೂರಿನಲ್ಲಿ ಪಕ್ಷದ ಮಾಧ್ಯಮ ವಿಭಾಗಗಳ ಮುಖ್ಯಸ್ಥರಿಗಾಗಿ ಏರ್ಪಡಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡುತ್ತಿದ್ದರು.
ಕಾಂಗ್ರೆಸ್ ಆಡಳಿತದ 10 ವರ್ಷಗಳ ಕತ್ತಲ ಯುಗದಿಂದ ಭಾರತವನ್ನು ಬೆಳಕಿನೆಡೆಗೆ ಕೊಂಡೊಯ್ಯುತ್ತಿರುವ ಮೋದಿ ಸರಕಾರ, ದೇಶದ ಘನತೆಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಹೆಚ್ಚಿಸುತ್ತಿದೆ. ಅವರ ಈ ಸಾಧನೆ ಅಪೂರ್ವವಾದುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪಕ್ಷದ ಜಿಲ್ಲಾ ಘಟಕದ ಮಾಧ್ಯಮ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.