ನವದೆಹಲಿ: ನೇಪಾಳದ ಪ್ರಧಾನಿ ಶೇರ್ ಬಹದ್ದೂರ್ ದ್ಯೂಬ ಅವರು 5 ದಿನಗಳ ಪ್ರವಾಸಕ್ಕಾಗಿ ಬುಧವಾರ ಭಾರತಕ್ಕೆ ಆಗಮಿಸಿದ್ದಾರೆ. ಇಂದಿರಾ ಗಾಂಧಿ ಇಂಟರ್ನ್ಯಾಷನಲ್ ಏರ್ಪೋರ್ಟ್ನಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಸ್ವಾಗತಿಸಿದರು.
2017ರ ಜೂನ್ನಲ್ಲಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿರುವ ದ್ಯೂಬ ಅವರ ಮೊದಲ ಭಾರತ ಭೇಟಿ ಇದಾಗಿದೆ. ಪತ್ನಿ ಅರ್ಝು ದ್ಯೂಬ ರಾಣಾ, ಸಂಪುಟ ಸಚಿವರು, ಸಂಸತ್ ಸದಸ್ಯರು, ಹಿರಿಯ ಅಧಿಕಾರಿಗಳು ಅವರಿಗೆ ಸಾಥ್ ನೀಡಿದ್ದಾರೆ.
ದ್ಯೂಬ ಅವರು ನೂತನ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾಗಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.