ನವದೆಹಲಿ: ‘ಖಾಸಗಿತನ ವ್ಯಕ್ತಿಯ ಮೂಲಭೂತ ಹಕ್ಕು’ ಎಂಬುದಾಗಿ ಸುಪ್ರೀಂಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ.
ಮುಖ್ಯನ್ಯಾಯಮೂರ್ತಿ ಜೆಎಸ್ ಖೇಹರ್ ಅವರ ನೇತೃತ್ವದ 9 ಮಂದಿ ನ್ಯಾಯಧೀಶರುಗಳನ್ನು ಒಳಗೊಂಡ ನ್ಯಾಯಪೀಠ ಖಾಸಗಿತನದ ಹಕ್ಕನ್ನು ಎತ್ತಿಹಿಡಿದಿದೆ.
ಸಂವಿಧಾನದ ಕಾಯ್ದೆ 21 ಮತ್ತು ಭಾಗ 3ರಡಿಯಲ್ಲಿ ಖಾಸಗಿತನವನ್ನು ರಕ್ಷಿಸಲಾಗಿದೆ ಎಂದು ಮುಖ್ಯನ್ಯಾಯಮೂರ್ತಿ ಖೇಹರ್ ಹೇಳಿದ್ದಾರೆ.
ಆಧಾರ್ನಲ್ಲಿ ಖಾಸಗಿ ಮಾಹಿತಿಗಳನ್ನು ಹಂಚಿಕೊಳ್ಳುವುದರ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿ ಈ ತೀರ್ಪು ನೀಡಲಾಗಿದೆ. ಆದರೆ ತೀರ್ಪಿನಲ್ಲಿ ಆಧಾರ್ ಬಗ್ಗೆ ಯಾವುದೇ ಅಭಿಪ್ರಾಯವನ್ನು ವ್ಯಕ್ತಪಡಿಸಲಾಗಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.