×
Home About Us Advertise With s Contact Us

ವಾಜಪೇಯಿಗೆ ’ಭಾರತ ರತ್ನ’ ಪ್ರದಾನ

bharaನವದೆಹಲಿ: ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಶುಕ್ರವಾರ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಭಾರತ ರತ್ನ’ವನ್ನು ಪ್ರದಾನ ಮಾಡಿದರು.

ವಾಜಪೇಯಿ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ಅತ್ಯುನ್ನತ ಗೌರವವನ್ನು ಅವರಿಗೆ ಪ್ರದಾನ ಮಾಡಲಾಯಿತು.

ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಸಚಿವ ರವಿಶಂಕರ್ ಪ್ರಸಾದ್, ಸಚಿವ ಹರ್ಷವರ್ಧನ್, ಅರುಣ್ ಜೇಟ್ಲಿ, ರಾಜನಾಥ್ ಸಿಂಗ್ , ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಬಾದಲ್, ರಾಜಸ್ಥಾನ ಸಿಎಂ ವಸುಂಧರಾ ರಾಜೆ, ಮದ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌವ್ಹಾಣ್, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

‘ವಾಜಪೇಯಿ ಅವರಿಗೆ ಭಾರತ ರತ್ನ ಪ್ರದಾನ ಮಾಡುವ ಅವಕಾಶ ನಮಗೆ ಸಿಕ್ಕಿದ್ದು ಸೌಭಾಗ್ಯದ ವಿಷಯ. ಅವರ ಜೀವನ ರಾಷ್ಟ್ರಕ್ಕಾಗಿ ಸಮರ್ಪಿತವಾಗಿದೆ. ಅವರ ಕಾರ್ಯ ಮುಂದಿನ ಪೀಳಿಗೆಗೂ ಮಾದರಿಯಾಗಲಿ’ ಎಂದು ಮೋದಿ ಹೇಳಿದರು.

ಅಲ್ಲದೇ ನಿವಾಸಕ್ಕೆ ಆಗಮಿಸಿ ಅತ್ಯನ್ನತ ಗೌರವವನ್ನು ವಾಜಪೇಯಿ ನೀಡಿದ ರಾಷ್ಟ್ರಪತಿಗಳಿಗೆ ಧನ್ಯವಾದ ಸಮರ್ಪಿಸಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top
error: Content is protected !!