ಲಕ್ನೋ: ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಮಂಗಳವಾರ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಅವರು ತಮ್ಮ ನಿವಾಸದಲ್ಲಿ ತಮ್ಮ ರಾಜ್ಯದ 25 ಕ್ರೀಡಾ ಸಾಧಕರಿಗೆ ಲಕ್ಷಣ ಮತ್ತು ರಾಣಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.
ಅಲ್ಲದೇ ವಿವಿಧ ಕ್ರೀಡೆಗಳಲ್ಲಿ ಅಮೋಘ ಸಾಧನೆಯನ್ನು ಮಾಡಿ ಕೀರ್ತಿ ತಂದ ಕ್ರೀಡಾಳುಗಳಿಗೆ ಹೆಚ್ಚುವರಿಯಾಗಿ ಆದಿತ್ಯನಾಥ ಅವರು ಸನ್ಮಾನ ಮಾಡಲಿದ್ದಾರೆ.
ಈ ಸಮಾರಂಭದಲ್ಲಿ ಕ್ರೀಡಾ ಸಚಿವರು, ಕ್ರೀಡಾ ಕಾರ್ಯದರ್ಶಿ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ.
ಹಾಕಿ ಲೆಜೆಂಡ್ ಮೇಜರ್ ಧ್ಯಾನ್ಚಂದ್ ಅವರ ಜನ್ಮದಿನವಾದ ಇಂದು ದೇಶದಾದ್ಯಂತ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.