ನವದೆಹಲಿ: ಕೇಂದ್ರ ಗೃಹಸಚಿವಾಲಯ ನೀಡಿರುವ ಅಧಿಸೂಚನೆ ವಿರುದ್ಧ ಕಾನೂನಾತ್ಮಕ ಕ್ರಮಕೈಗೊಳ್ಳಲು ದೆಹಲಿಯ ಎಎಪಿ ಸರ್ಕಾರ ನಿರ್ಧರಿಸಿದೆ. ಅದಕ್ಕಾಗಿ ಕಾನೂನು ಮತ್ತು ಸಂವಿಧಾನ ತಜ್ಞರ ಸಲಹೆಯನ್ನು ಪಡೆದುಕೊಳ್ಳುತ್ತಿದೆ.
ಲೆಫ್ಟಿನೆಂಟ್ ಗವರ್ನರ್ ಅವರಿಗೆ ಅಧಿಕಾರಿಗಳನ್ನು ನೇಮಿಸುವ ಮತ್ತು ವರ್ಗಾವಣೆಗೊಳಿಸುವ ಅಧಿಕಾರವಿದೆ ಎಂದು ಹೇಳಿ ಗೃಹಸಚಿವಾಲಯ ಅಧಿಸೂಚನೆ ಹೊರಡಿಸಿತ್ತು, ಇದು ಎಎಪಿ ಸರ್ಕಾರದ ಕೆಂಗಣ್ಣಿಗೆ ಕಾರಣವಾಗಿತ್ತು.
ನರೇಂದ್ರ ಮೋದಿ ಸರ್ಕಾರ ಹಿಂಬಾಗಿಲಿನ ಮೂಲಕ ದೆಹಲಿಯಲ್ಲಿ ಆಡಳಿತ ನಡೆಸಲು ಹವಣಿಸುತ್ತಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದರು.
ಇದೀಗ ಕೇಂದ್ರದ ಅಧಿಸೂಚನೆ ವಿರುದ್ಧ ಕಾನೂನು ಸಮರ ಸಾರಲು ಎಎಪಿ ಮುಂದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.