ಘಾಜಿಯಾಬಾದ್: ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಅವರು ಗುರುವಾರ ಘಾಜಿಯಾಬಾದ್ನಲ್ಲಿ ಕೈಲಾಸ ಮಾನಸ ಸರೋವರ ಭವನಕ್ಕೆ ಶಿಲಾನ್ಯಾಸ ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು, ‘ಈ ಭವನ ಉತ್ತರಪ್ರದೇಶದ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಿದೆ. ಕೈಲಾಸ ಭವನ ನಿರ್ಮಾಣದ ಭರವಸೆಯನ್ನು ಈಡೇರಿಸುವಲ್ಲಿ ನಾವು ಹಿಂದೆ ಬೀಳುವುದಿಲ್ಲ’ ಎಂದಿದ್ದಾರೆ.
ಅಲ್ಲದೇ ಧಾರ್ಮಿಕ ಕೇಂದ್ರಗಳಾದ ಶಹರಣಪುರ ಶಾಕುಂಬರಿ ದೇಗುಲ, ಮುಝಾಫರನಗರದ ಶುಕ್ರತಲ ಆಶ್ರಮಗಳನ್ನು ಅಭಿವೃದ್ಧಿಪಡಿಸುವುದಾಗಿ ಅವರು ಹೇಳಿದ್ದಾರೆ.
ಕೈಲಾಸ ಮಾನಸ ಸರೋವರ ಭವನವನ್ನು ಸುಮಾರು 50 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. 500 ಭಕ್ತಾದಿಗಳಿಗೆ ಇದು ಆಶ್ರಯ ಒದಗಿಸಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.