ಚೆನ್ನೈ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನಿರ್ದೋಷಿಯಾಗಿ ಹೊರ ಬಂದಿರುವ ಎಐಎಡಿಎಂಕೆ ಪಕ್ಷದ ಅಧಿನಾಯಕಿ ಜಯಲಲಿತಾ ಅವರು ಶನಿವಾರ 5ನೇ ಬಾರಿಗೆ ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಮದ್ರಾಸ್ ವಿಶ್ವವಿದ್ಯಾನಿಲಯದ ಶತಮಾನೋತ್ಸವ ಹಾಲ್ನಲ್ಲಿ ನಡೆದ ಸಮಾರಂಭದಲ್ಲಿ ಜಯಾ ಅವರೊಂದಿಗೆ ಇತರ 28 ಮಂದಿ ಸಚಿವರು ಪ್ರಮಾಣವಚನ ಸ್ವೀಕಾರ ಮಾಡಿದರು. ಗವರ್ನರ್ ಕೆ.ರೊಸಯ್ಯ ಇವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಜಯ ಅವರ ಸಂಪುಟದಲ್ಲಿ ಯಾವುದೇ ಹೊಸ ಮುಖಗಳಿಲ್ಲ. ಪನ್ನೀರ ಸೆಲ್ವಂ ಕ್ಯಾಬಿನೆಟ್ನಲ್ಲಿದ್ದವರೇ ಮತ್ತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಬಿಸಿಸಿಐ ಮಾಜಿ ಮುಖ್ಯಸ್ಥ ಎನ್.ಶ್ರೀನಿವಾಸನ್, ಸೂಪರ್ ಸ್ಟಾರ್ ರಜನೀಕಾಂತ್, ಸಂಗೀತ ನಿರ್ದೇಶಕ ಇಳಯರಾಜ, ಕೇಂದ್ರ ಸಚಿವ ಪೋನ್ ರಾಧಕೃಷ್ಣನ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.