ದುಬೈ: ಸೌದಿ ಅರೇಬಿಯಾದ ಪೂರ್ವ ಭಾಗದಲ್ಲಿನ ಶಿಯಾ ಮಸೀದಿಯೊಂದಕ್ಕೆ ನುಗ್ಗಿದ ಸುಸೈಡ್ ಬಾಂಬರ್ ಒಬ್ಬ ತನ್ನನ್ನು ತಾನೇ ಸ್ಫೋಟಿಸಿಕೊಂಡು ಇತರ 20 ಮಂದಿಯ ಸಾವಿಗೆ ಕಾರಣನಾದ ಘಟನೆ ಶುಕ್ರವಾರ ನಡೆದಿದೆ.
ಈ ಘಟನೆಯಲ್ಲಿ 50 ಮಂದಿಗೆ ಗಂಭೀರ ಗಾಯಗಳಾಗಿದೆ. 20 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ. ಶುಕ್ರವಾರದ ಪ್ರಾರ್ಥನೆಯ ಸಂದರ್ಭ ಈ ಘಟನೆ ನಡೆದಿದೆ, ಈ ವೇಳೆ ಮಸೀದಿಯಲ್ಲಿ ಸುಮಾರು 150 ಮಂದಿ ಪ್ರಾರ್ಥನೆ ಸಲ್ಲಿಸುತ್ತಿದ್ದರು.
ನವೆಂಬರ್ ಬಳಿಕ ಸೌದಿಯಲ್ಲಿ ನಡೆದ ಮೊದಲ ದಾಳಿ ಇದಾಗಿದೆ. ಕಳೆದ ನವೆಂಬರ್ನಲ್ಲೂ ಶಿಯಾ ಮುಸ್ಲಿಂರನ್ನು ಗುರಿಯಾಗಿರಿಸಿ ಗುಂಡಿನ ದಾಳಿ ನಡೆಸಲಾಗಿತ್ತು, ಇದರಲ್ಲಿ 8 ಮಂದಿ ಹತರಾಗಿದ್ದರು.
ಇಸಿಸ್ ಸಂಘಟನೆ ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಈ ಘಟನೆಯಿಂದ ಗಲ್ಫ್ ದೇಶಗಳಲ್ಲಿ ಶಿಯಾ ಮತ್ತು ಸುನ್ನಿ ಮುಸ್ಲಿಂರ ಬಾಂಧವ್ಯ ಮತ್ತಷ್ಟು ಬಿಗಡಾಯಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.