ಬೆಂಗಳೂರು: ಪತ್ರಕರ್ತೆ, ಚಿಂತಕಿ ಗೌರಿ ಲಂಕೇಶ್ ಅವರನ್ನು ಮಂಗಳವಾರ ದುಷ್ಕರ್ಮಿಗಳು ಅವರ ನಿವಾಸದಲ್ಲಿಯೇ ಗುಂಡಿಟ್ಟು ಕೊಲೆ ಮಾಡಿದ್ದಾರೆ. ಈ ಘಟನೆ ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದ್ದು, ಭಾರೀ ಖಂಡನೆ ವ್ಯಕ್ತವಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಘಟನೆಗೆ ಆಘಾತ ವ್ಯಕ್ತಪಡಿಸಿದ್ದು, ಪೊಲೀಸರು ಮೂರು ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ ಎಂದರು. ಅಲ್ಲದೇ ಕೊಲೆಗಾರರನ್ನು ಶೀಘ್ರ ಬಂಧಿಸಲು ಆದೇಶಿಸಿರುವುದಾಗಿ ತಿಳಿಸಿದರು.
ಬಿಜೆಪಿ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರೂ ಘಟನೆಯನ್ನು ಖಂಡಿಸಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಕಿಡಿಕಾರಿದ್ದಾರೆ.
ಘಟನೆಯನ್ನು ಖಂಡಿಸಿ ಇಂದು ವಿವಿಧ ಸಂಘಟನೆಗಳು ರಾಜ್ಯಾದ್ಯಂತ ಪ್ರತಿಭಟನೆಗಳನ್ನು ನಡೆಸುತ್ತಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.