ಬಾಗಲಕೋಟೆ: ಜಿಲ್ಲಾ ಕ್ರೀಡಾ ವಸತಿ ಶಾಲೆ ವಿದ್ಯಾರ್ಥಿಗಳು ವಸತಿ ನಿಲಯದ ನಿಲಯ ಪಾಲಕರ ವರ್ತನೆ ಖಂಡಿಸಿ ಮಂಗಳವಾರ ರಾತ್ರಿ ಜಿಲ್ಲಾಧಿಕಾರಿ ನಿವಾಸದ ಮುಂದೆ ಪ್ರತಿಭಟನೆ ನಡೆಸಿದರು.
ಜಿಲ್ಲಾ ಕ್ರೀಡಾ ವಸತಿ ಶಾಲೆ ವಿದ್ಯಾರ್ಥಿಗಳು ವಸತಿ ನಿಲಯದ ನಿಲಯ ಪಾಲಕ ವಿಲಾಸ ಗಾಡಿ ವಸತಿ ನಿಲಯದ ಮಕ್ಕಳೊಂದಿಗೆ ಅಸಭ್ಯವಾಗಿ ವರ್ತಿಸುತ್ತಾರೆ. ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಏನಾದರೂ ಕೇಳಲು ಹೋದಲ್ಲಿ ಬಡಿಯುತ್ತಾರೆ ಎಂದು ಆರೋಪಿಸಿ ವಸತಿ ನಿಲಯದ ಸುಮಾರು 30 ಕ್ಕೂ ಅಧಿಕ ವಿದ್ಯಾರ್ಥಿಗಳು ಡಿಸಿ ಪಿ.ಎ. ಮೇಘಣ್ಣವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದರು.
ಸ್ಥಳಕ್ಕೆ ಆಗಮಿಸಿದ ಡಿಸಿ ಪಿ.ಎ.ಮೇಘಣ್ಣವರ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ , ಮೊಬೈಲ್ನಲ್ಲೇ ವಿಲಾಸ ಗಾಡಿ ಅವರನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ವಸತಿ ನಿಲಯಕ್ಕೆ ಬರುವುದಾಗಿ ಹೇಳಿ ವಿದ್ಯಾರ್ಥಿಗಳನ್ನು ವಸತಿ ನಿಲಯಕ್ಕೆ ಕಳುಹಿಸಿದರು. ನಂತರ ತಾವೂ ಹೋಗಿ ವಿದ್ಯಾರ್ಥಿಗಳು ಮತ್ತು ನಿಲಯಪಾಲಕರ ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗೆ ಪರಿಹಾರ ಕಲ್ಪಿಸಿದರು.
ಈ ವೇಳೆ ಅವರು ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಏನು ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ವಿದ್ಯಾರ್ಥಿಗಳನ್ನು ಉತ್ತಮ ರೀತಿಯಿಂದ ನೋಡಿಕೊಳ್ಳಬೇಕು. ಅವರೊಂದಿಗೆ ಚೆನ್ನಾಗಿ ವರ್ತನೆ ಮಾಡಬೇಕು ಎಂದು ಗಾಡಿ ಅವರಿಗೆ ಡಿಸಿ ತಾಕೀತು ಮಾಡಿದರು.
ಉಪ ವಿಭಾಗಾಧಿಕಾರಿ ಶಂಕರಗೌಡ ಸೋಮನಾಳ ಇದ್ದರು.
ಮನೆಗೆ ಮುಂದೆ ಬಂದಿದ್ದ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ ಸಂಬಂಧಿಸಿದ ಅಧಿಕಾರಿಗೆ ಮುಂದೆ ಈ ರೀತಿ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದ್ದೇನೆ. ವಸತಿ ನಿಲಯಕ್ಕೆ ಭೇಟಿ ನೀಡಿ ಅಗತ್ಯ ಸೌಕರ್ಯಗಳನ್ನು ವಿದ್ಯಾರ್ಥಿಗಳಿಗೆ ನೀಡಬೇಕು. ಅಸಭ್ಯವಾಗಿ ವರ್ತಿಸದಂತೆ ತಿಳಿಸಿದ್ದೇನೆ.
-ಪಿ.ಎ.ಮೇಘಣ್ಣವರ, ಡಿಸಿ ಬಾಗಲಕೋಟೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.