ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಎಐಎಡಿಎಂಕೆ ಮುಖ್ಯಸ್ಥೆ ಜೆ.ಜಯಲಲಿತಾ ಅವರು ನಿದೋರ್ಷಿ ಎಂಬ ಹೈಕೋರ್ಟ್ ತೀರ್ಪನ್ನು ರಾಜ್ಯ ಕಾನೂನು ಇಲಾಖೆ ಪರಿಶೀಲನೆ ನಡೆಸುತ್ತಿದೆ. ಇದರ ವರದಿ ಸಿಕ್ಕಿದ ಬಳಿಕ ಪ್ರಕರಣ ಸಂಬಂಧ ಮೇಲ್ಮನವಿ ಸಲ್ಲಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಇಂದು ಜಯಲಲಿತಾ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಐದನೇ ಬಾರಿಗೆ ಪ್ರಮಾಣವಚನ ಸ್ವೀಕಾರ ಮಾಡಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಕರ್ನಾಟಕ ಹೈಕೋರ್ಟ್ ತೀರ್ಪನ್ನು ನಮ್ಮ ಕಾನೂನು ಇಲಾಖೆ ಪರಿಶೀಲನೆ ನಡೆಸುತ್ತಿದೆ. ಇಲಾಖೆ ವರದಿ ಸಲ್ಲಿಸಿದ ಬಳಿಕ, ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸುವ ಬಗ್ಗೆ ನಿರ್ಧರಿಸಲಾಗುವುದು’ ಎಂದರು.
ಈ ಸಂಬಂಧ ಎಐಸಿಸಿ ಜತೆ ಚರ್ಚಿಸಿದ್ದೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ಇಲ್ಲ. ಪಕ್ಷದ ಹೈಕಮಾಂಡ್ ರಾಜ್ಯದ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ’ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.