ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಬಿಜೆಪಿ ಮತ್ತು ಆರ್ಎಸ್ಎಸ್ ಕಾರಣ ಎಂದು ಟೀಕಿಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಹರಿಹಾಯ್ದಿರುವ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್, ಯಾಕೆ ಕರ್ನಾಟಕ ಸರ್ಕಾರ ಕೊಲೆಯಾದ ವಿಚಾರವಾದಿಗಳಿಗೆ ಭದ್ರತೆಯನ್ನು ಒದಗಿಸಿಲ್ಲ ಎಂಬುದನ್ನು ತಿಳಿದುಕೊಳ್ಳಿ ಎಂದಿದ್ದಾರೆ.
ಅಲ್ಲದೇ ಎಂ.ಎನ್ ಕಲ್ಬುರ್ಗಿಯವರ ಹತ್ಯೆಯ ತನಿಖೆಯ ಬಗ್ಗೆ ಎಂದಾದರು ರಾಹುಲ್ ಸಿಎಂ ಸಿದ್ದರಾಮಯ್ಯನವರ ಬಳಿ ವಿಚಾರಿಸಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.
ಗೌರಿ ಕೊಲೆಯನ್ನು ನಾವು ಖಂಡಿಸಿದ್ದರೂ, ಬಿಜೆಪಿಗರು ಯಾಕೆ ಖಂಡಿಸಿಲ್ಲ ಎಂದು ಹಲವರು ಟೀಕಿಸುತ್ತಿದ್ದಾರೆ ಎಂದಿರುವ ಅವರು, ಕೇರಳ ಮತ್ತು ಕರ್ನಾಟಕದಲ್ಲಿ ನಡೆಯುತ್ತಿರುವ ಆರ್ಎಸ್ಎಸ್ ಕಾರ್ಯಕರ್ತರ ಹತ್ಯೆಯನ್ನು ವಿಚಾರವಾದಿಗಳು, ಬುದ್ಧಿಜೀವಿಗಳು ಯಾಕೆ ಖಂಡಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.
ಕೇರಳ, ಕರ್ನಾಟಕದಲ್ಲಿ ಆರ್ಎಸ್ಎಸ್ನವರಿಗೆ ತಮ್ಮದೇ ಆದ ಸಿದ್ಧಾಂತವನ್ನು ಹೊಂದುವ ಹಕ್ಕಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಜಾಗವಿಲ್ಲ, ಇಂತಹ ಹೀನ ಕೃತ್ಯಗಳನ್ನು ನಾವು ಖಂಡಿಸುತ್ತೇವೆ ಎಂದರು.
ಗೌರಿ ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಕಾರ್ಯ ಮಾಡುತ್ತಿದ್ದರು ಎಂಬ ಇಂದ್ರಜಿತ್ ಲಂಕೇಶ್ ಹೇಳಿಕೆಯನ್ನು ಪ್ರಸ್ತಾಪಿಸಿರುವ ಅವರು, ಒಂದು ವೇಳೆ ಆಕೆ ಕರ್ನಾಟಕ ಸರ್ಕಾರದ ಸಮ್ಮತಿಯಿಂದ ಈ ಕಾರ್ಯವನ್ನು ಮಾಡುತ್ತಿದ್ದರೂ ಎಂದಾದರೆ ಅವರಿಗೆ ಸರ್ಕಾರ ಯಾಕೆ ಭದ್ರತೆಯನ್ನು ಒದಗಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ನ ಗ್ರೇಟ್ ಲೀಡರ್ ರಾಹುಲ್ ಅವರು ಯಾವುದೇ ಹೊಂವರ್ಕ್ ಮಾಡದೆ ಹೇಳಿಕೆ ನೀಡುವುದರಲ್ಲಿ ನಿಸ್ಸೀಮರು. ಬಿಜೆಪಿ, ಆರ್ಎಸ್ಎಸ್ ಮೇಲೆ ಯಾವುದೇ ಆಧಾರವಿಲ್ಲದೆ ಅವರು ಆರೋಪ ಮಾಡಿದ್ದಾರೆ. ಇಂತಹ ಸ್ಥಿತಿಯಲ್ಲಿ ಕರ್ನಾಟಕ ಸರ್ಕಾರ ನ್ಯಾಯಸಮ್ಮತ ತನಿಖೆಯನ್ನು ನಡೆಸುತ್ತದೆ ಎಂಬುದನ್ನು ನಿರೀಕ್ಷಿಸುವುದಾದರೂ ಹೇಗೆ ಎಂದು ಅವರು ಪ್ರಶ್ನಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.