ನವದೆಹಲಿ: ತಳಮಟ್ಟದಲ್ಲಿ ಕ್ರೀಡೆಯನ್ನು ಪ್ರಚಾರಪಡಿಸಲು ಮಹತ್ವದ ಕಾರ್ಯಕ್ರಮಗಳನ್ನು ಕೈಗೊಂಡ ವ್ಯಕ್ತಿಗಳಿಗಾಗಿ ಆರ್ಪಿ-ಸಂಜೀವ್ ಗೋಯೆಂಕಾ ಗ್ರೂಪ್ನೊಂದಿಗೆ ಕೈಜೋಡಿಸಿರುವ ಕ್ರಿಕೆಟಿಗ ವಿರಾಟ್ ಕೊಹ್ಲಿ ಸ್ಕಾಲರ್ಶಿಪ್ ಪ್ರೋಗ್ರಾಂನ್ನು ಆರಂಭಿಸಿದ್ದಾರೆ.
ಸ್ಕಾಲರ್ಶಿಪ್ನ ಫಲಾನುಭವಿಗಳಿಗಾಗಿ ವಾರ್ಷಿಕ 2 ಕೋಟಿ ರೂಪಾಯಿಗಳನ್ನು ವ್ಯಯಿಸಲು ವಿರಾಟ್ ಕೊಹ್ಲಿ ಫೌಂಡೇಶನ್ ನಿರ್ಧರಿಸಿದೆ.
ಆರ್ಪಿ-ಸಂಜೀವ್ ಗೋಯೆಂಕಾ ಸ್ಪೋರ್ಟ್ಸ್ ಹಾನರ್ಸ್ಗೆ ಚಾಲನೆ ನೀಡಿ ಮಾತನಾಡಿದ ಕೊಹ್ಲಿ, ‘ಭಾರತ ಕ್ರೀಡಾ ದೇಶವಾಗುವತ್ತ ದಾಪುಗಾಲಿಡುತ್ತಿದೆ. ನಮ್ಮ ಉನ್ನತ ಕ್ರೀಡಾ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಸಂಸ್ಥೆಯನ್ನು ಹುಟ್ಟು ಹಾಕಲು ಈ ಸಂದರ್ಭ ಸರಿಯಾಗಿದೆ’ ಎಂದು ಕೊಹ್ಲಿ ಅಭಿಪ್ರಾಯಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.