ಲಕ್ನೋ: ಆಡಳಿತದಲ್ಲಿ ಪಾರದರ್ಶಕತೆಯನ್ನು ತರಲು ಸಾಕಷ್ಟು ಕ್ರಮಗಳನ್ನು ತೆಗೆದುಕೊಂಡಿರುವ ಉತ್ತರಪ್ರದೇಶದ ಯೋಗಿ ಆದಿತ್ಯನಾಥ ಸರ್ಕಾರ ಇದೀಗ ಕಾರ್ಯನಿರ್ವಹಿಸದ ಮತ್ತು ಆರೋಪಗಳನ್ನು ಹೊತ್ತಿರುವ ಸರ್ಕಾರಿ ಉದ್ಯೋಗಿಗಳಿಗೆ ಮತ್ತು ಅಧಿಕಾರಿಗಳಿಗೆ ನಿವೃತ್ತಿಯನ್ನು ನೀಡಲು ಮುಂದಾಗಿದೆ.
ವರದಿಗಳ ಪ್ರಕಾರ ಸಿಎಂ ಯೋಗಿ ಅವರು ಕೆಟ್ಟದಾಗಿ ಕಾರ್ಯನಿರ್ವಹಿಸುತ್ತಿರುವ ಮತ್ತು ಭ್ರಷ್ಟಾಚಾರಿ ಅಧಿಕಾರಿಗಳ ಪಟ್ಟಿಯನ್ನು ಸಂಗ್ರಹಿಸುತ್ತಿದ್ದಾರೆ. ಇವರ ವಿರುದ್ಧ ಅವರು ಶೀಘ್ರದಲ್ಲೇ ಕ್ರಮಗಳನ್ನು ತೆಗೆದುಕೊಳ್ಳಲಿದ್ದಾರೆ.
ಈ ಬಗ್ಗೆ ಯುಪಿ ಮುಖ್ಯ ಕಾರ್ಯದರ್ಶಿ ರಾಜೀವ್ ಕುಮಾರ್ ಅವರು ಎಲ್ಲಾ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ, ಪ್ರಧಾನ ಕಾರ್ಯದರ್ಶಿಗಳಿಗೆ, ಇಲಾಖೆಗಳ ಮುಖ್ಯಸ್ಥರುಗಳಿಗೆ ಪತ್ರ ಬರೆದು ಮಾಹಿತಿ ತಿಳಿಸಿದ್ದಾರೆ.
ಭ್ರಷ್ಟ ಹಾಗೂ ಸೋಮಾರಿ ಅಧಿಕಾರಿಗಳ ಪಟ್ಟಿ ತಯಾರಿಸಲು ಅವರಿಗೆ ಪತ್ರದಲ್ಲಿ ಸೆ.15ರ ಡೆಡ್ಲೈನ್ ನೀಡಲಾಗಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.