ಮುಂಬಯಿ: ಭ್ರಷ್ಟಾಚಾರದಲ್ಲಿ ತೊಡಗಿರುವ ಸುಮಾರು 49 ಸಾವಿರ ಆಧಾರ್ ನೋಂದಣಿ ಕೇಂದ್ರಗಳನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ ಎಂದು ವಿಭಿನ್ನ ಗುರುತಿನ ಚೀಟಿ ಪ್ರಾಧಿಕಾರ ಹೇಳಿದೆ.
ಆಧಾರ್ ಸಂಬಂಧಿಸಿದ ಸೇವೆಗಳಿಗೆ ಹೆಚ್ಚುವರಿ ಶುಲ್ಕ ವಿಧಿಸಿ, ಜನರನ್ನು ವಂಚಿಸುತ್ತಿರುವ ಆಧಾರ್ ಆಪರೇಟರ್ಗಳನ್ನು 5 ವರ್ಷಗಳ ಅವಧಿಗೆ ಕಪ್ಪು ಪಟ್ಟಿಗೆ ಸೇರಿಸಲಾಗಿದೆ. ಅಲ್ಲದೇ 50 ಸಾವಿರ ರೂಪಾಯಿಗಳ ದಮಡವನ್ನೂ ವಿಧಿಸಲಾಗಿದೆ ಎಂದು ಪ್ರಾಧಿಕಾರ ಹೇಳಿದೆ.
ಹಲವಾರು ಅರ್ಜಿದಾರರಿಂದ ದೂರುಗಳು ಬಂದ ಹಿನ್ನಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. 2016ರ ಡಿಸೆಂಬರ್ನಿಂದ ಒಟ್ಟು 6,100 ದೂರುಗಳು ಬಂದಿವೆ. 2017ರ ಜುಲೈನಿಂದ 466 ಇಂತಹ ದೂರುಗಳು ಬಂದಿವೆ ಎಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.