ಲಕ್ನೋ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗುರುವಾರದಿಂದ ಎರಡು ದಿನಗಳ ಉತ್ತರಪ್ರದೇಶ ಪ್ರವಾಸವನ್ನು ಹಮ್ಮಿಕೊಳ್ಳಲಿದ್ದಾರೆ. ಇವರ ಸ್ವಾಗತಕ್ಕಾಗಿ ಲಕ್ನೋ ಸಿದ್ಧವಾಗಿದ್ದು, ಭದ್ರತೆಯನ್ನೂ ಬಿಗಿಗೊಳಿಸಲಾಗಿದೆ.
ಕೋವಿಂದ್ ಅವರು ಇಂದು ಅಂಬೇಡ್ಕರ್ ಮಹಾಸಭಾ ಆಯೋಜನೆ ಮಾಡುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಸ್ಮರಣಾರ್ಥ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಶುಕ್ರವಾರ ದೀನ್ ದಯಾಳ್ ಉಪಾಧ್ಯಾಯ ಅವರ ಸ್ಮರಣಾರ್ಥ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಕೋವಿಂದ್ ಅವರ ಪೂರ್ವಜರ ಮನೆ ಕನ್ಪುರ ದೆಹತ್ ಜಿಲ್ಲೆಯ ಪರುಂಕ ಗ್ರಾಮದಲ್ಲಿದ್ದು, ಅವರು ಇಲ್ಲಿಗೆ ಭೆಟಿ ಕೊಡುತ್ತಾರೆಯೇ ಎಂಬುದು ಸ್ಪಷ್ಟವಾಗಿಲ್ಲ.
ಯುಪಿ ಸಿಎಂ ಯೋಗಿ ಆಧಿತ್ಯನಾಥ ಅವರೊಂದಿಗೆ ಔತನಕೂಟದಲ್ಲೂ ಅವರು ಭಾಗಿಯಾಗಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.