×
Home About Us Advertise With s Contact Us

ಯುವ ಭಾರತ್-ನಯಾ ಭಾರತ್ ಕಾರ್ಯಕ್ರಮದಲ್ಲಿ ಮಂಗಳೂರಿನ ವಿದ್ಯಾರ್ಥಿಗಳು

ನವದೆಹಲಿ/ಮಂಗಳೂರು : ಚಿಕಾಗೋದಲ್ಲಿ ಸ್ವಾಮಿ ವಿವೇಕಾನಂದರು ಸರ್ವಧರ್ಮ ಸಮ್ಮೇಳನದಲ್ಲಿ ಐತಿಹಾಸಿಕ ಭಾಷಣ ಮಾಡಿದ 125 ನೇ ವಾರ್ಷಿಕೋತ್ಸವ ಮತ್ತು ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ  100ನೇ ವರ್ಷದ ಜನ್ಮಶತಾಬ್ದಿಯ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 11 ರಂದು ದೆಹಲಿಯ ವಿಜ್ಞಾನ ಭವನದಲ್ಲಿ ಆಯೋಜಿಸಿದ್ದ ಯುವ ಭಾರತ್-ನಯಾ ಭಾರತ್ ಕಾರ್ಯಕ್ರಮದಲ್ಲಿ ಕರ್ನಾಟಕದ 26 ವಿದ್ಯಾರ್ಥಿಗಳಲ್ಲಿ ದಕ್ಷಿಣ ಕನ್ನಡವನ್ನು ಪ್ರತಿನಿಧಿಸಿದ ಸಹ್ಯಾದ್ರಿ ಎಂಜಿನೀಯರಿಂಗ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಾದ ಕೃತೇಶ್ ಭಂಡಾರಿ, ಕಾರ್ತಿಕ್ ಎಸ್. ರೈ ಮತ್ತು ಚಿರಾಗ್ ಬಂಗೇರಾ ಇವರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ದೇಶದ ನಾನಾ ಭಾಗಗಳಿಂದ ಬಂದಿದ್ದ ವಿದ್ಯಾರ್ಥಿ ಪ್ರತಿನಿಧಿಗಳನ್ನು ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾತನಾಡಿದರು. ಕೇಂದ್ರ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋರ್ ಮತ್ತು  ಮಹೇಶ್ ಶರ್ಮಾ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Recent News

Back To Top
error: Content is protected !!