ಬಾಗಲಕೋಟೆ : ಮುಂದಿನ ಚುನಾವಣೆಯಲ್ಲಿ ಅಭ್ಯರ್ಥಿ ಯಾರು ಎನ್ನುವ ಬಗ್ಗೆ ತಲೆಕೆಡಿಸಿಕೊಳ್ಳಬೇಕಾದ ಅಗತ್ಯವಿಲ್ಲ. ಎಲ್ಲ ಕಡೆಗಳಲ್ಲೂ ಪಕ್ಷವೇ ಅಭ್ಯರ್ಥಿ ಎಂದು ತಿಳಿದು ಕೆಲಸ ಮಾಡಿ. ಮೂರು-ನಾಲ್ಕು ಸರ್ವೆ ಬಳಿಕ ಪಕ್ಷದ ಅಭ್ಯರ್ಥಿ ಯಾರು ಎನ್ನುವುದು ನಿರ್ಧಾರವಾಗಲಿದೆ. ವ್ಯಕ್ತಿಯ ಗೆಲುವಿಗಿಂತ ಪಕ್ಷವನ್ನು ಗೆಲ್ಲಿಸುವ ಕೆಲಸ ಆಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.
ನಗರದ ಬಿವಿವಿ ಸಂಘದ ಬಸವೇಶ್ವರ ಮಂಗಲ ಭವನದಲ್ಲಿ ಗುರುವಾರ ಬಿಜೆಪಿ ಆಯ್ದ ಕಾರ್ಯಕರ್ತರ ಬೂತ್ ಮಟ್ಟದಲ್ಲಿ ಪಕ್ಷದ ಸಶಕ್ತೀಕರಣ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಬಿಜೆಪಿಗೆ ದೈವಬಲ, ಜನಬಲವಿರುವಾಗ 150 ಕ್ಷೇತ್ರಗಳನ್ನು ಗೆಲ್ಲುವ ಯಾವ ಆತಂಕವೂ ಇಲ್ಲ. ಪಕ್ಷದ ಕಾರ್ಯಕರ್ತರು ಇಂದಿನಿಂದ ಎಪ್ರಿಲ್ ಮೊದಲ ವಾರದವರೆಗೂ ಪಕ್ಷ ಸಂಘಟನೆ ಹಾಗೂ ಚುನಾವಣೆಗೆ ತಮ್ಮ ಸಮಯವನ್ನು ಮೀಸಲಿಡಬೇಕು ಎಂದು ಅವರು ಹೇಳಿದರು.
ಡಿವೈಎಸ್ಪಿ ಗಣಪತಿ ಹತ್ಯೆ ಹಿನ್ನೆಲೆಯಲ್ಲಿ ಸಚಿವ ಕೆ.ಜೆ. ಜಾರ್ಜ್ ರಾಜಿನಾಮೆಗೆ ಆಗ್ರಹಿಸಿ ಸೆ. 16 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಆಯೋಜಿಸಲಾಗಿದೆ. ರ್ಯಾಲಿಯಲ್ಲಿ ಹಾಲಿ ಮಾಜಿ ಸಂಸದರು. ಸಚಿವರು, ಶಾಸಕರು, ಪಕ್ಷದ ಪ್ರಮುಖರು ಭಾಗವಹಿಸಲಿದ್ದಾರೆ. ಜಾರ್ಜ್ ರಾಜಿನಾಮೆವರೆಗೂ ಹೋರಾಟ ನಡೆಯಲಿದೆ ಎಂದರು.
ರಾಜ್ಯ ಸರ್ಕಾರವನ್ನು ಇದೇ ವೇಳೆ ತರಾಟೆಗೆ ತೆಗೆದುಕೊಂಡ ಬಿಎಸ್ವೈ ದೇಶಕಂಡ ಅತ್ಯಂತ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ದೂರಿದರು. ರಾಜ್ಯ ಸರ್ಕಾರದ ಬೊಕ್ಕಸವನ್ನು ಕಾಂಗ್ರೆಸ್ ಸರ್ಕಾರ ಹಾಳು ಮಾಡಿದೆ ಎಂದು ದೂರಿದರು.
ಕೇಂದ್ರ ಸಚಿವ ರಮೇಶ ಜಿಗಜಿಣಗಿ ಮಾತನಾಡಿ, ಮುಂದಿನ ವರ್ಷ ನಡೆಯುವ ಚುಣಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಆಡಳಿತಕ್ಕೆ ತರುವಲ್ಲಿ ಎಲ್ಲರು ಶತಾಯಗತಾತ ಶ್ರಮಿಸಬೇಕು. ಮುಂದಿನ ಮುಖ್ಯಮಂತ್ರಿ ಯಡಿಯ್ಯರಪ್ಪ ಅವರೆ ಆಗಲಿದ್ದಾರೆ ಎಂದು ತಿಳಿಸಿದರು.
ಯಡಿಯೂರಪ್ಪ ಅವರು ಮುಂದಿನ ಸಿಎಂ ಆಗುವ ಹಾಗೆ ಎಲ್ಲರು ಶ್ರಮವಹಿಸಿ ಕೆಲಸ ಮಾಡಬೇಕು. ಜೊತೆಗೆ ರಾಜ್ಯ ಸರ್ಕಾರದ ತಪ್ಪು ಕೆಲಸಗಳನ್ನು ಜನರ ಮುಂದೆ ತರಬೇಕು ಮತ್ತು ಪ್ರಧಾನಿ ಮಫದಿ ಮಾಡಿರುವ ಒಳ್ಳೆಯ ಕೆಲಸಗಳನ್ನು ಎಲ್ಲರಿಗು ತಲುಪಿಸಬೇಕು ಎಂದು ತಿಳಿಸಿದರು.
ಬಿಜೆಪಿ ರಾಜ್ಯ ಉಸ್ತುವಾರಿ ಮುರಳಿಧರ ರಾವ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ಮೇಲ್ಮನೆ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ, ಸಂಸದ ಪಿ.ಸಿ.ಗದ್ದಿಗೌಡರ, ಶೋಭಾ ಕರಂದ್ಲಾಜೆ, ರವಿಕುಮಾರ ಇತರರು ವೇದಿಕೆ ಮೇಲೆ ಇದ್ದರು.
ಕಾರ್ಯಾಗಾರದಲ್ಲಿ ಜಿಲ್ಲೆಯ ಪ್ರಮುಖರಾದ ಶಾಸಕ ಗೋವಿಂದ ಕಾರಜೋಳ, ಮಾಜಿಶಾಸಕರಾದ ವೀರಣ್ಣ ಚರಂತಿಮಠ, ಶ್ರೀಕಾಂತ ಕುಲಕರ್ಣಿ, ಸಿದ್ದು ಸವದಿ, ದೊಡ್ಡನಗೌಡ ಪಾಟೀಲ, ಮಾಜಿ ಸಚಿವ ಮುರಗೇಶ ನಿರಾಣಿ, ಮುಖಂಡ ಜಗದೀಶ ಹಿರೇಮನಿ ಇತರರು ಇದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.