ಬೆಂಗಳೂರು : ಸೆಪ್ಟೆಂಬರ್ 12 ರಂದು ನಡೆದ #IamGauri ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡಿದ್ದ ಬೆಂಗಳೂರಿನ ಸೆಂಟ್ ಜಾನ್ಸ್ ಕಾಲೇಜಿನ NCC ತಂಡವು, ಘೋಷಣಾ ಪತ್ರಗಳನ್ನು ಪ್ರದರ್ಶಿಸುವ ಮೂಲಕ ಪ್ರತಿಭಟನೆಯಲ್ಲಿ ತನ್ನ ದನಿಯನ್ನು ಸೇರಿಸಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿರುವ Citizens for Democracy ಸಂಘಟನೆಯು, ಪ್ರಕರಣಕ್ಕೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ದೂರು ನೀಡಿದೆ.
NCC act 1948ರ ಅನ್ವಯ, ಯಾವುದೇ ವಿದ್ಯಾರ್ಥಿಯು NCC ಸಮವಸ್ತ್ರವನ್ನು ಧರಿಸಿ ಪ್ರತಿಭಟನೆಗಳು, ರಾಜಕೀಯ ಸಭೆಗಳಲ್ಲಿ ಭಾಗವಹಿಸುವಂತಿಲ್ಲ. ಆದರೆ ಸೆಂಟ್ರಲ್ ಕಾಲೇಜು ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸೆಂಟ್ ಜೋಸೆಫ್ ಕಾಲೇಜಿನ NCC ತಂಡವು ಪ್ರತಿಭಟನಾಕಾರರ ಪರವಾಗಿ ಚಟುವಟಿಕೆಯಿಂದ ಓಡಾಡುತ್ತಾ, ಕರಪತ್ರಗಳನ್ನು, ಘೋಷಣಾ ಪತ್ರಗಳನ್ನು ಪ್ರದರ್ಶಿಸಿದ್ದರು. ಆ ಎಲ್ಲ ಘಟನೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಓಡಾಡಿ ಸಾರ್ವಜನಿಕರ ಹುಬ್ಬೇರಿಸಿತ್ತು.
ಈ ಸಂಬಂಧ Citizens for Democracy ಯು ದೂರು ನೀಡಿದ್ದು, ದೂರಿನ ಪ್ರತಿಯನ್ನು ಪ್ರಧಾನಮಂತ್ರಿ ಕಚೇರಿ, ಕೇಂದ್ರ ರಕ್ಷಣಾ ಸಚಿವಾಲಯಕ್ಕೆ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.