ನವದೆಹಲಿ: ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಸರ್ಕಾರ ದೆಹಲಿಯಲ್ಲಿ ಆಡಳಿತಕ್ಕೆ ಬಂದು 100 ದಿನಗಳನ್ನು ಪೂರೈಸಿದೆ. ಈ ಹಿನ್ನಲೆಯಲ್ಲಿ ರಾಷ್ಟ್ರ ರಾಜಧಾನಿಯ ಸೆಂಟ್ರಲ್ ಪಾರ್ಕ್ನಲ್ಲಿ ಸೋಮವಾರ ಸಾರ್ವಜನಿಕ ಸಭೆ ನಡೆಸಲು ಕೇಜ್ರಿವಾಲ್ ನಿರ್ಧರಿಸಿದ್ದಾರೆ.
ಈ ವೇಳೆ ಅವರು ದೆಹಲಿ ಜನತೆಯೊಂದಿಗೆ ಸಂವಾದವನ್ನೂ ನಡೆಸಲಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರೊಂದಿಗಿನ ಕಿತ್ತಾಟದ ಬಗ್ಗೆ ಸಂವಾದದಲ್ಲಿ ಪ್ರಸ್ತಾಪವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಎಎಪಿಯ ಸಾರ್ವಜನಿಕ ಸಭೆಗೆ ಎನ್ಡಿಎಂಸಿ ಅನುಮತಿ ನೀಡಿದರೂ, ದೆಹಲಿ ಪೊಲೀಸರಿಂದ ಅನುಮತಿ ಇನ್ನಷ್ಟೇ ಸಿಗಬೇಕಿದೆ.
ಎಎಪಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ 67ಸ್ಥಾನಗಳನ್ನು ಪಡೆದು ಅಭೂತಪೂರ್ವ ದಿಗ್ವಿಜಯವನ್ನು ಸಾಧಿಸಿತ್ತು. ಇದೀಗ ಅಧಿಕಾರಕ್ಕೆ ಬಂದು ಅದು 100 ದಿನಗಳನ್ನು ಪೂರೈಸಿದೆ.
ವಿದ್ಯುತ್ ಬಿಲ್, ನೀರಿನ ಸಮಸ್ಯೆಯನ್ನು ಹೋಗಲಾಡಿಸಿದ್ದು, ಭ್ರಷ್ಟಾಚಾರವನ್ನು ಹತ್ತಿಕ್ಕಿದ್ದು ನಮ್ಮ ಸಾಧನೆಯೆಂದು ಎಎಪಿ ಹೇಳಿಕೊಳ್ಳುತ್ತಿದೆ. ಆದರೆ ಆಂತರಿಕ ಕಚ್ಚಾಟಗಳು, ಲೆ.ಗವರ್ನರ್ರೊಂದಿಗಿನ ಜಟಾಪಟಿ ಸರ್ಕಾರದ ಇಮೇಜ್ಗೆ ಧಕ್ಕೆಯುಂಟು ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.