ಲಕ್ನೋ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ‘ರಾಷ್ಟ್ರಧರ್ಮ’ ಸಿದ್ಧಾಂತವನ್ನು ಎಲ್ಲರೂ ಪಾಲಿಸಬೇಕು, ಧರ್ಮ, ಜಾತಿಗಳನ್ನು ಲೆಕ್ಕಿಸದೆ ಸಮ್ಮಿಶ್ರ ಸಂಸ್ಕೃತಿಯನ್ನು ಗೌರವಿಸಿ ಎಲ್ಲರನ್ನೂ ಜೊತೆಗೆ ಕರೆದೊಯ್ಯಬೇಕು ಎಂದು ರಾಷ್ಟ್ರಪತಿ ರಮನಾಥ ಕೋವಿಂದ್ ಕರೆ ನೀಡಿದ್ದಾರೆ.
ಉತ್ತರಪ್ರದೇಶ ಪ್ರವಾಸದಲ್ಲಿರುವ ಅವರು ಗುರುವಾರ ಸರ್ಕಾರ ಏರ್ಪಡಿಸಿದ ಸ್ವಾಗತ ಕಾರ್ಯಕ್ರಮದಲ್ಲಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದರು.
ಅಟಲ್ ಜೀಯವರು ತಮ್ಮ ಸರ್ಕಾರ ಅಧಿಕಾರದಲ್ಲಿ ಇರಲಿ, ಇಲ್ಲದೇ ಇರಲಿ ದೇಶದ ಹಿತಾಸಕ್ತಿಯೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳುತ್ತಿರಲಿಲ್ಲ. ರಾಷ್ಟ್ರಧರ್ಮ ಎಂಬುದು ಎಲ್ಲದಕ್ಕಿಂತಲೂ ಮಿಗಿಲಾದುದು ಎಂದು ಕೋವಿಂದ್ ಅಭಿಪ್ರಾಯಿಸಿದ್ದಾರೆ.
ದೇಶದ ಪ್ರತಿಯೊಬ್ಬ ನಾಗರಿಕನೂ ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ಪಾಳ್ಗೊಳ್ಳಬೇಕು ಎಂದು ಕರೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.