ನಾಗ್ಪುರ: ತನ್ನ ರಾಜ್ಯದಲ್ಲಿನ ಶಿಶು ಮರಣ ಪ್ರಮಾಣವನ್ನು ತಗ್ಗಿಸುವ ಸಲುವಾಗಿ ಮಹಾರಾಷ್ಟ್ರ ಸರ್ಕಾರ 3 ನಿಯೋನಾಟಲ್ ಇಂಟೆನ್ಸಿವ್ ಕೇರ್ ಯುನಿಟ್(ಎನ್ಐಸಿಯು)ಗಳನ್ನು ತೆರೆಯಲು ನಿರ್ಧರಿಸಿದೆ.
ವಿದರ್ಭದ ಚಂದ್ರಪುರ ಮತ್ತು ಅಮರಾವತಿಯಲ್ಲಿ ಎರಡು ಯುನಿಟ್ಗಳು ಸ್ಥಾಪನೆಯಾಗಲಿದೆ. ಮತ್ತೊಂದು ನಾಸಿಕ್ನಲ್ಲಿ ಸ್ಥಾಪನೆಯಾಗಲಿದೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ದೀಪಕ್ ಸಾವಂತ್ ತಿಳಿಸಿದ್ದಾರೆ.
ನವಜಾತ ಶಿಶುಗಳ ಉತ್ತಮ ಚಿಕಿತ್ಸೆಗಾಗಿ ಮಹಾರಾಷ್ಟ್ರದಾದ್ಯಂತದ ಸರ್ಕಾರಿ ಆಸ್ಪತ್ರೆಗಳಿಗೆ 230 ಇನ್ಕ್ಯುಬೇಟರ್ಸ್ಗಳನ್ನು ಪೂರೈಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.
2017ರ ಆಗಸ್ಟ್ವರೆಗೆ ವಿದರ್ಭದ ಚಂದ್ರಪುರದಲ್ಲಿ 3,369 ಶಿಶುಗಳ ಜನನವಾಗಿತ್ತು. ಇವುಗಳಲ್ಲಿ 2,216 ಶಿಶುಗಳು 2.5 ಕೆಜಿಗಿಂತ ಕಡಿಮೆ ತೂಕ ಹೊಂದಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.