ಮಂಗಳೂರು : ಡಿ.ವೈ.ಎಸ್ಪಿ ಗಣಪತಿ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ಕೈವಾಡ ಇರುವುದು ಪದೇಪದೇ ಸಾಬೀತಾಗುತ್ತಿದ್ದರೂ ಅವರ ರಕ್ಷಣೆಗೆ ನಿಂತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ನಡೆಯನ್ನು ವಿರೋಧಿಸಿ ಜಾರ್ಜ್ ಅವರ ರಾಜೀನಾಮೆಗೆ ಆಗ್ರಹಿಸಿ ಇಂದು ಭಾರತೀಯ ಜನತಾ ಪಾರ್ಟಿ ವತಿಯಿಂದ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಅದರನ್ವಯ ಮಂಗಳೂರಿನ ಜಿಲ್ಲಾಧಿಕಾರಿ ಕಛೇರಿ ಎದುರು ತಾ. 16-9-2017 ರಂದು ಬೃಹತ್ ಪ್ರತಿಭಟನೆ ನಡೆಸಲಾಯಿತು.
ಗಣಪತಿ ಸಾವಿನಿಂದ ನೊಂದಿರುವ ಅವರ ಕುಟುಂಬಕ್ಕೆ ನ್ಯಾಯ ಸಿಗಬೇಕು. ಅವರ ಸಾವಿಗೆ ಕಾರಣರಾದವರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಬೇಕು ಎಂದು ವೇದವ್ಯಾಸ ಕಾಮತ್ ಅವರು ಹೇಳಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಕ್ಯಾಪ್ಟನ್ ಬ್ರಿಜೇಶ್ ಚೌಟ, ಉಮಾನಾಥ್ ಕೋಟ್ಯಾನ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.